ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಬನವಾಸಿ: ರೈತರು ಕೃಷಿಯಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಆರ್ಥಿಕವಾಗಿ ಸದೃಡ ಹೊಂದಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಅವರು ಪಟ್ಟಣದಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಶಿರಸಿ ತಾಲೂಕು ಪಂಚಾಯತ್ ಮತ್ತು ತಾಲೂಕು ಆಡಳಿತ ಹಾಗೂ ಶಿರಸಿ ಕೃಷಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಬನವಾಸಿ ರೈತ ಸಂಪರ್ಕ …
Read More »TimeLine Layout
ಜನವರಿ, 2021
-
23 ಜನವರಿ
ಪ್ರಸಕ್ತ 2020-21 ನೇ ಸಾಲಿನ ಎನ್.ಟಿ.ಎಸ್.ಇ ಪರೀಕ್ಷೆಗೆ 1882 ವಿದ್ಯಾರ್ಥಿಗಳು, ಎನ್.ಎಮ್.ಎಮ್.ಎಸ್ ಪರೀಕ್ಷೆಗೆ 2163 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಮೂಡಲಗಿ: ಪ್ರಸಕ್ತ 2020-21 ನೇ ಸಾಲಿನ ಎನ್.ಟಿ.ಎಸ್.ಇ ಪರೀಕ್ಷೆಗೆ 1882 ವಿದ್ಯಾರ್ಥಿಗಳು, ಎನ್.ಎಮ್.ಎಮ್.ಎಸ್ ಪರೀಕ್ಷೆಗೆ 2163 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೂಡಲಗಿ ವಲಯವು 2012 ರಿಂದ ರಾಜ್ಯದಲ್ಲಿಯೇ ಅತೀ ಹೆಚ್ಚು ಈ ಸ್ಪಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಲಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಾಗಿರುವ ಈ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನವನ್ನು ಒದಗಿಸುತ್ತವೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಪೈಪೋಟಿ ನೀಡಲು ವಲಯದ ಸಂಪನ್ಮೂಲ …
Read More » -
23 ಜನವರಿ
ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿಂದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More » -
22 ಜನವರಿ
15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಸಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ
15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಸಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ …
Read More » -
21 ಜನವರಿ
ಪ್ರಗತಿಪರ ರೈತ ಅಶೋಕ ಪರಮಾನಂದ ಕೋಣಿ ಅವರಿಗೆ ರೈತ ಬಂಧು ಪ್ರಶಸ್ತಿ
ಬೆಟಗೇರಿ:ಬದಾಮಿ ತಾಲೂಕಿನ ಕೆರಕಲಮಟ್ಟಿ ಕೇದರನಾಥ ಶುಗರ್ಸ್ ಲಿ. ಆವರಣದಲ್ಲಿ ಜ.17 ರಂದು ನಡೆದ ನೂತನ ಕಾರ್ಖಾನೆ ಉದ್ಘಾಟನೆ ಸಮಾರಂಭದಲ್ಲಿ ಮುಧೋಳ ಎಂ.ಆರ್.ಎನ್ (ನಿರಾಣಿ) ಉದ್ಯಮ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಕೃಷಿ ವಿಕಾಸ ಹಿತದೃಷ್ಠಿಯಿಂದ ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ರೈತರಿಗೆ ನೀಡುವ ರೈತ ಬಂಧು ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಗತಿಪರ ರೈತ ಅಶೋಕ ಪರಮಾನಂದ ಕೋಣಿ ಅವರಿಗೆ ನೀಡಿ ಗೌರವಿಲಾಗಿದೆ. ಸಚಿವ ಮುರುಗೇಶ ನಿರಾಣಿ, ಎಂಎಲ್ಸಿ …
Read More » -
21 ಜನವರಿ
ಎಪಿಎಂಸಿ ಆವರಣದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ
ಎಪಿಎಂಸಿ ಆವರಣದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ ಮೂಡಲಗಿ: ಇಲ್ಲಿಯ ಕೃಷಿ ಉತ್ಪನ ಮಾರುಕಟ್ಟೆ ಆವರಣದಲ್ಲಿ 2020-21ನೇ ಸಾಲಿನ ವಾರ್ಷಿಕ ಕ್ರೀಯಾ ಯೋಜನೆಯಲ್ಲಿ ಸೂಮಾರು 40 ಲಕ್ಷ ರೂಗಳ ಅನುದಾನದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಮತ್ತು ಎಪಿಎಂಸಿ ಉಪಾಧ್ಯಕ್ಷ ಕೆ.ಕೆ.ಸಂಕ್ರೆಪ್ಪಗೋಳ ಭೂಮಿ ಪೂಜೆ ನೆರೆವೇರಿಸಿದರು. ಭೂಮಿ ಪೂಜೆ ನೆರವೇರಿಸಿದ ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಮಾತನಾಡಿ, ಕೆಎಂಎಫ್ ಅಧ್ಯಕ್ಷ ಮತ್ತು …
Read More » -
21 ಜನವರಿ
ತಾಲ್ಲೂಕಾ ಅಸೋಸಿಯೇಶನ್ದ ನೂತನ ಪದಾಧಿಕಾರಿಗಳಿಗೆ ಕಲಾವಿದರಿಂದ ಸನ್ಮಾನ.
ಮೂಡಲಗಿ ತಾಲ್ಲೂಕು ಅಸೋಸಿಯೇಶನ್ದ ನೂತನ ಪದಾಧಿಕಾರಿಗಳನ್ನು ಕಲಾವಿದರು ಸನ್ಮಾನಿಸಿದರು ಪ್ರೆಸ್ ಅಸೋಸಿಯೇಶನ್ ಪದಾಧಿಕಾರಿಗಳ ಸನ್ಮಾನ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು’ ಮೂಡಲಗಿ: ‘ಕಲಾವಿದರು ಆರ್ಥಿಕವಾಗಿ ಬಡವರಾಗಿದ್ದರೂ ಸಹ ಅವರು ನಂಬಿರುವ ಕಲೆ ಮತ್ತು ಹೃದಯವು ಶ್ರೀಮಂತವಾಗಿರುತ್ತದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮೂಡಲಗಿ ತಾಲ್ಲೂಕು ಪ್ರೆಸ್ ಅಸೋಸಿಯೇಶನ್ಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಸ್ಥಳೀಯ ಕಲಾವಿದರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದ ಅವರು ಕಲೆ, …
Read More » -
20 ಜನವರಿ
ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ
ಬೆಟಗೇರಿ:ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಈಗ ಗಣನೀಯ ಪ್ರಮಾಣದಲ್ಲಿ …
Read More » -
20 ಜನವರಿ
ಪಾಲಕರು ಕರೊನಾ ಭಯದಿಂದ ಹೊರಬನ್ನಿ-ಕಡಾಡಿ
ಪಾಲಕರು ಕರೊನಾ ಭಯದಿಂದ ಹೊರಬನ್ನಿ-ಕಡಾಡಿ ಮೂಡಲಗಿ: ಕರೊನಾ ಭಯದಿಂದ ಹೊರಬಂದು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಶಿಕ್ಷಣ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಸಮೀಪದ ನಾಗನೂರ ಪಟ್ಟಣದ ಶತಮಾನ ಕಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಜ.18 ಭೇಟಿ ನೀಡಿ ವಿದ್ಯಾಗಮ ಕಾರ್ಯಕ್ರಮ ವೀಕ್ಷಣೆ, ಮಕ್ಕಳೊಂದಿಗೆ ಸಂವಾದ ಹಾಗೂ ವಿದ್ಯಾರ್ಥಿಗಳಿಗೆ …
Read More » -
19 ಜನವರಿ
ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ
ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿಯಲ್ಲಿ ಶ್ರೀರಾಮ ಮಂದಿರದ ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ …
Read More »
IN MUDALGI Latest Kannada News