Breaking News

TimeLine Layout

ಆಗಷ್ಟ್, 2025

  • 18 ಆಗಷ್ಟ್

    ಹಬ್ಬದಲ್ಲಿ ನಿಯಮ ಪಾಲಿಸಿ – ಸಿಪಿಐ ಶ್ರೀಶೈಲ ಬ್ಯಾಕೂಡ

    ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜರುಗಿದ ಶಾಂತಿ ಸಭೆಯಲ್ಲಿ ಸಿಪಿಐ ಶ್ರೀಶೈಲ ಬ್ಯಾಕೂಡ ಮಾತನಾಡಿದರು.  ಮೂಡಲಗಿ: ಗಣೇಶೋತ್ಸವ ಮತ್ತು ಈದ್ ಮಿಲಾದ್ ವೇಳೆ ನಿಯಮ ಮೀರಿ ಯಾರೇ ನಡೆದುಕೊಂಡರೆ ನಿರ್ಧಾಕ್ಷಿನಿವಾಗಿ ಕಾನೂನು ಕ್ರಮ ಜರುಗಿಸಲಾಗುವುದು. ಹಬ್ಬಗಳನ್ನು ಸಂಪ್ರದಾಯದಂತೆ ಆಚರಿಸಬೇಕು. ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಹಿಂದೂ-ಮುಸ್ಲಿಂ ಭಾಂದವರು ಶಾಂತಿ ಸೌರ್ಹಾದದಿಂದ ಆಚರಿಸಬೇಕು ಎಂದು ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು. …

    Read More »
  • 17 ಆಗಷ್ಟ್

    ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ನಮ್ಮ ಗ್ರಾಮೀಣ ಭಾಗದ ಜನರಿಗೆ ತಲುಪಿಸಲು ಯುವ ಸಂಘಟನೆಗಳ ಪಾತ್ರ ಪ್ರಮುಖವಾಗಿದೆ – ಸುಭಾಷ್ ಪಾಟೀಲ

      ಮೂಡಲಗಿ : ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ನಮ್ಮ ಗ್ರಾಮೀಣ ಭಾಗದ ಜನರಿಗೆ ತಲುಪಿಸಲು ಯುವ ಸಂಘಟನೆಗಳ ಪಾತ್ರ ಪ್ರಮುಖವಾಗಿದೆ ಎಂದು ಭಾರತಿ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ ಹೇಳಿದರು. ಅವರು ಮೂಡಲಗಿ ನಗರದ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ ನನ್ನ ಭಾರತ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ …

    Read More »
  • 17 ಆಗಷ್ಟ್

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂತವರು ಪ್ರತಿ ಮನೆ- ಮನೆಗೂ ಹುಟ್ಟಿ ಬರಬೇಕು- ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಗೋಕಾಕ- ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಬ್ರಿಟಿಷ್ ರೊಂದಿಗೆ ಹೋರಾಡಿ ದೇಶವು ಸ್ವತಂತ್ರಗೊಳ್ಳಲು ಕಾರಣೀಕರ್ತರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಂತವರು ಪ್ರತಿ ಮನೆ- ಮನೆಗೂ ಹುಟ್ಟಿ ಬರಬೇಕು. ರಾಯಣ್ಣನಂತಹ ದೇಶ ಪ್ರೇಮಿಗಳನ್ನು ಒಂದೇ ಜಾತಿಗೆ ಸೀಮಿತ ಮಾಡಬೇಡಿ ಎಂದು ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸಮಾಜ ಬಾಂಧವರಿಗೆ ಕಿವಿಮಾತು ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಬಳೋಬಾಳ ಗ್ರಾಮದಲ್ಲಿ ಸುಮಾರು ೪೦ ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ …

    Read More »
  • 17 ಆಗಷ್ಟ್

    ಶ್ರೀಮತಿ ಭೀಮವ್ವ ಲಕ್ಷ್ಮಣ್ ರಾವ್ ಜಾರಕಿಹೊಳಿ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ಸಂಭ್ರಮ

    ಕುಲಗೋಡ : ಶ್ರೀಮತಿ ಭೀಮವ್ವ ಲಕ್ಷ್ಮಣ್ ರಾವ್ ಜಾರಕಿಹೊಳಿ ಸರಕಾರಿ ಪ್ರೌಢಶಾಲೆ ಮನ್ನಿಕೇರಿ ಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶ್ರೀ ಬಸವರಾಜ ಮುನವಳ್ಳಿ 20,000 ರೂಪಾಯಿ ನಗದು ಬಹುಮಾನ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ …

    Read More »
  • 16 ಆಗಷ್ಟ್

    ರಾಧಾ ಕೃಷ್ಣನ ವೇಷಭೂಷಣದಲ್ಲಿ ಗಮನಸೆಳೆದ ಮಕ್ಕಳು

    ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್.ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಕ್ಕಳು ರಾಧಾ ಕೃಷ್ಣನ ವೇಷಭೂಷನ ಗಮನಸೆಳೆಯಿತು. ಶ್ರೀ ಕೃಷ್ಣ ಮೂರ್ತಿಗೆ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್.ಸೋನವಾಲಕರ ಅವರು ಪೂಜೆಸಲ್ಲಿಸಿ ಮಾತನಾಡಿ, ಮಕ್ಕಳು ಅರೋಗ್ಯ ಮತ್ತು ಖುಷಿಯಾಗಿ ಇರಲು ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಬಹಳ ಮುಖ್ಯ ಎಂದು ಹೇಳಿದರು. ಸಂಸ್ಥೆಯ ನಿರ್ದೇಶಕ ಸಂದೀಪ್ ಸೋನವಾಲಕರ ಮಾತನಾಡಿ, ಇಂದಿನ ತಂತ್ರಜ್ಞಾನ …

    Read More »
  • 16 ಆಗಷ್ಟ್

    ಬಾಲಕಿ ಭುವನಾ ಅವಳು ಬಾಲ ಶ್ರೀಕೃಷ್ಣನ ವೇಷಭೂಷಣ

    ಬೆಣ್ಣೆ ಕಳ್ಳ ಬಾಲಕೃಷ್ಣ…. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಾಲಕಿ ಭುವನಾ ಶಿವರುದ್ರಗೌಡ ದೇಯಣ್ಣವರ ಅವಳು ಶನಿವಾರದಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಬಾಲ ಶ್ರೀಕೃಷ್ಣನ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದಳು.

    Read More »
  • 16 ಆಗಷ್ಟ್

    ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಬೇಕು: ಪಿಎಸ್‍ಐ ಬಿ.ಆನಂದ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ವ ಧರ್ಮಿಯರು ಸೌಹಾರ್ದತೆಯಿಂದ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಪಿಎಸ್‍ಐ ಬಿ. ಆನಂದ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆ, ಮೂಡಲಗಿ ಪೊಲೀಸ್ ಠಾಣೆ ಸಿಪಿಐ ವೃತ್ತ ಕಛೇರಿ ಹಾಗೂ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.15ರಂದು ನಡೆದ …

    Read More »
  • 16 ಆಗಷ್ಟ್

    ಬೆಟಗೇರಿ ಬೀರಸಿದ್ಧೇಶ್ವರ ದೇವಸ್ಥಾನದ ದಾಸೋಹ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೀರಸಿದ್ಧೇಶ್ವರ ದೇವಸ್ಥಾನ ದಾಸೋಹ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ಥಳೀಯ ಬೀರಸಿದ್ಧೇಶ್ವರ ದೇವಸ್ಥಾನದ ಅರ್ಚಕ ಗುರಪ್ಪ ಮಾಕಾಳಿ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ, ಬೀರಸಿದ್ಧೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಸುಭಾಷ ಕರೆಣ್ಣವರ, ಕಾರ್ಯದರ್ಶಿ ಮಾಯಪ್ಪ ಬಾಣಸಿ, ವಿಠ್ಠಲ ಕೋಣಿ, ಸದಾಶಿವ ಕುರಿ, ಬಸಪ್ಪ ಮಾಕಾಳಿ, ಬಸಪ್ಪ ಮಾಲದಿನ್ನಿ, ಸದ್ಬಕ್ತರು, ಸ್ಥಳೀಯರು, …

    Read More »
  • 16 ಆಗಷ್ಟ್

    ಸಬ್ ಕಾ ಮಾಲೀಕ ಏಕ್ ಹೈ ಎಂಬುದನ್ನು ಒತ್ತಿ ಹೇಳಿದ ಸಾಯಿ ಬಾಬಾ- ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ:ಪಟ್ಟಣದ ಸತ್ಯಸಾಯಿ ಸೇವಾ ಸಮೀತಿಯವರು ಸಾರ್ವಜನಿಕರು ಮತ್ತು ವಿವಿಧ ಸಂಘ- ಸಂಸ್ಥೆಗಳ ವಂತಿಗೆಯಲ್ಲಿ ಭವ್ಯವಾಗಿ ನಿರ್ಮಿಸಿರುವ ಸಾಯಿ ಮಂದಿರವು ಭಕ್ತರನ್ನು ಆಕರ್ಷಿಸುವ ಸುಂದರವಾದ ಮಂದಿರವಾಗಿದೆ. ಸಾಯಿಬಾಬಾ ಸಕಲ ಭಕ್ತರ ಸಂಕಷ್ಟಗಳನ್ನು ನಿವಾರಿಸಿ ಎಲ್ಲರಲ್ಲಿಯೂ ಪ್ರೀತಿ, ಸಹನೆ ಮೂಡುವಂತಾಗಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಗುರುವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸಾಯಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿಯಲ್ಲಿಯೇ ಸುಂದರವಾದ ಮಂದಿರವನ್ನು ನಿರ್ಮಿಸಲು ಶಕ್ತಿ …

    Read More »
  • 16 ಆಗಷ್ಟ್

    ಬೆಟಗೇರಿ ಗ್ರಾಮ ಪಂಚಾಯ್ತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.15ರಂದು 79ನೇ ಸ್ವಾತಂತ್ರ್ಯೋತ್ಸವ ಸಡಗರದಿಂದ ಆಚರಣೆ ನಡೆಯಿತು. ಬೆಟಗೇರಿ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಲಕ್ಷ್ಮಣ ಚಂದರಗಿ ಧ್ವಜಾರೋಹಣ ನೆರವೇರಿಸಿದರು. ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ, ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ನಡೆಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಪಿಡಿಒ ಎಂ.ಎಲ್ ಯಡ್ರಾಂವಿ, ಕಾರ್ಯದರ್ಶಿ ಬಸವರಾಜ ಪಣದಿ, ಮಾರುತಿ ತಳವಾರ, ಸುರೇಶ ಬಾಣಸಿ, ವಿಠಲ ಚಂದರಗಿ, ಮಂಜು ಕಂಬಿ, …

    Read More »