Breaking News

TimeLine Layout

ಆಗಷ್ಟ್, 2025

  • 16 ಆಗಷ್ಟ್

    ಬೆಟಗೇರಿ ಬೀರಸಿದ್ಧೇಶ್ವರ ದೇವಸ್ಥಾನದ ದಾಸೋಹ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೀರಸಿದ್ಧೇಶ್ವರ ದೇವಸ್ಥಾನ ದಾಸೋಹ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ಥಳೀಯ ಬೀರಸಿದ್ಧೇಶ್ವರ ದೇವಸ್ಥಾನದ ಅರ್ಚಕ ಗುರಪ್ಪ ಮಾಕಾಳಿ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ, ಬೀರಸಿದ್ಧೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಸುಭಾಷ ಕರೆಣ್ಣವರ, ಕಾರ್ಯದರ್ಶಿ ಮಾಯಪ್ಪ ಬಾಣಸಿ, ವಿಠ್ಠಲ ಕೋಣಿ, ಸದಾಶಿವ ಕುರಿ, ಬಸಪ್ಪ ಮಾಕಾಳಿ, ಬಸಪ್ಪ ಮಾಲದಿನ್ನಿ, ಸದ್ಬಕ್ತರು, ಸ್ಥಳೀಯರು, …

    Read More »
  • 16 ಆಗಷ್ಟ್

    ಸಬ್ ಕಾ ಮಾಲೀಕ ಏಕ್ ಹೈ ಎಂಬುದನ್ನು ಒತ್ತಿ ಹೇಳಿದ ಸಾಯಿ ಬಾಬಾ- ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ:ಪಟ್ಟಣದ ಸತ್ಯಸಾಯಿ ಸೇವಾ ಸಮೀತಿಯವರು ಸಾರ್ವಜನಿಕರು ಮತ್ತು ವಿವಿಧ ಸಂಘ- ಸಂಸ್ಥೆಗಳ ವಂತಿಗೆಯಲ್ಲಿ ಭವ್ಯವಾಗಿ ನಿರ್ಮಿಸಿರುವ ಸಾಯಿ ಮಂದಿರವು ಭಕ್ತರನ್ನು ಆಕರ್ಷಿಸುವ ಸುಂದರವಾದ ಮಂದಿರವಾಗಿದೆ. ಸಾಯಿಬಾಬಾ ಸಕಲ ಭಕ್ತರ ಸಂಕಷ್ಟಗಳನ್ನು ನಿವಾರಿಸಿ ಎಲ್ಲರಲ್ಲಿಯೂ ಪ್ರೀತಿ, ಸಹನೆ ಮೂಡುವಂತಾಗಲಿ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಗುರುವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಸಾಯಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿಯಲ್ಲಿಯೇ ಸುಂದರವಾದ ಮಂದಿರವನ್ನು ನಿರ್ಮಿಸಲು ಶಕ್ತಿ …

    Read More »
  • 16 ಆಗಷ್ಟ್

    ಬೆಟಗೇರಿ ಗ್ರಾಮ ಪಂಚಾಯ್ತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ಆ.15ರಂದು 79ನೇ ಸ್ವಾತಂತ್ರ್ಯೋತ್ಸವ ಸಡಗರದಿಂದ ಆಚರಣೆ ನಡೆಯಿತು. ಬೆಟಗೇರಿ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಲಕ್ಷ್ಮಣ ಚಂದರಗಿ ಧ್ವಜಾರೋಹಣ ನೆರವೇರಿಸಿದರು. ಮಹಾತ್ಮಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ, ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ನಡೆಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಪಿಡಿಒ ಎಂ.ಎಲ್ ಯಡ್ರಾಂವಿ, ಕಾರ್ಯದರ್ಶಿ ಬಸವರಾಜ ಪಣದಿ, ಮಾರುತಿ ತಳವಾರ, ಸುರೇಶ ಬಾಣಸಿ, ವಿಠಲ ಚಂದರಗಿ, ಮಂಜು ಕಂಬಿ, …

    Read More »
  • 16 ಆಗಷ್ಟ್

    ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು: ಈರಪ್ಪ ದೇಯಣ್ಣವರ

    ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್‍ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು ನಡೆದ 79ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು ಎಂದರು. …

    Read More »
  • 16 ಆಗಷ್ಟ್

    ‘ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ರೂ.4.15 ಕೊಟಿ ಲಾಭ’

    ಮೂಡಲಗಿ: ‘ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ ರೂ.4.15 ಕೋಟಿ ನಿವ್ವಳ ಲಾಭವನ್ನು ಪಡೆದು ಪ್ರಗತಿಯಲ್ಲಿ ಸಾಗಿದೆ’ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಅವರು ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ 34ನೇ ವರ್ಷದ ಸರ್ವಸಾಧಾರಣಾ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಸದ್ಯ ಶೇರು ಬಂಡವಾಳ ರೂ. 78.96 ಲಕ್ಷ, ಠೇವುಗಳು ರೂ.78.84 ಕೋಟಿ, ನಿಧಿಗಳು …

    Read More »
  • 15 ಆಗಷ್ಟ್

    *ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

    ಮೂಡಲಗಿ:-ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ರಾತ್ರಿ ೧೨.೦೦ ಗಂಟೆಯ ಸಮಯದಲ್ಲಿ ನಾಗನೂರ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸುವ ಅವಕಾಶ ದೊರೆತಿರುವುದು ನನ್ನ ಅದೃಷ್ಟವೆಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ನಾಗನೂರ ಪಟ್ಟಣದ ಮಾಧವಾನಂದ ಆಶ್ರಮದ ಬಳಿ ೭೯ ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಮೂಡಲಗಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಬರುವ ಸಂದರ್ಭದಲ್ಲಿ ನಾಗನೂರ ಪಟ್ಟಣದ ಪ್ರಮುಖರು ಸೇರಿಕೊಂಡು ಇಲ್ಲಿಯೇ ಧ್ವಜಾರೋಹಣ ನೆರವೇರಿಸಿಕೊಂಡು ಹೋಗಿರಿ …

    Read More »
  • 14 ಆಗಷ್ಟ್

    *ಮೂಡಲಗಿಯಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

    ಮೂಡಲಗಿ: ಅಸಂಘಟಿತ ಕಾರ್ಮಿಕರು, ಬಡ ಜನರಿಗೆ ಇಂದಿರಾ ಕ್ಯಾಂಟಿನ್ ವರದಾನವಾಗಿದ್ದು, ಕಡಿಮೆ ದರದಲ್ಲಿ ಉಪಹಾರ ಮತ್ತು ಊಟದ ಸೌಲಭ್ಯಗಳನ್ನು ಹೊಂದಿರುವ ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಕರೆ ನೀಡಿದರು. ಗುರುವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತೆರೆಯಲಾದ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು, ಬಡ ಬಗ್ಗರಿಗೆ ಇದು ಉಪಯುಕ್ತವಾಗಿದೆ ಎಂದು ತಿಳಿಸಿದರು. ಕಡಿಮೆ ದರದಲ್ಲಿ ಬೆಳಗಿನ ಉಪಹಾರ ಮತ್ತು …

    Read More »
  • 13 ಆಗಷ್ಟ್

    ಎಸ್.ಎಸ್. ಢವಣ, ರಾಮದುರ್ಗ ಕ್ಷೇತ್ರದ ಬಿಡಿಸಿಸಿ ಬ್ಯಾಂಕ್ ಚುನಾವಣೆಯ ಅಭ್ಯರ್ಥಿ

    ಬೆಳಗಾವಿ: ಅಕ್ಟೋಬರ್ ತಿಂಗಳಲ್ಲಿ ಜರುಗುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಫೆನಲ್ ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರದಂದು ಜರುಗಿದ ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯವರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …

    Read More »
  • 13 ಆಗಷ್ಟ್

    ಆರ್.ಡಿ.ಎಸ್. ಕಾಲೇಜಿನಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕಾರ

    ಮೂಡಲಗಿ : ಮಾದಕ ವಸ್ತು ಸೇವೆನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವದಲ್ಲದೆ ದೈಹಿಕ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಇಂದಿನ ಯುವಕರು ಡ್ರಗ್ಸ್ ತಂಬಾಕು ಗಾಂಜಾ ಹಾಗೂ ಮಧ್ಯಪಾನಗಳ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಅವುಗಳನ್ನು ಸೇವನೆ ಮಾಡುವದರಿಂದ ದೂರ ಇರುವ ಯುವ ಸಮುದಾಯ ಸೃಷ್ಟಿಯಾಗುವುದು ಅವಶ್ಯಕವಿದೆ ಎಂದು ಆರ್.ಡಿ.ಎಸ್. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಂತೋಷ ಪಾರ್ಶಿ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯ ಹಾಗೂ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯಗಳ …

    Read More »
  • 11 ಆಗಷ್ಟ್

    ಚಂದ್ರಪ್ಪ ರುದ್ರಪ್ಪ ಸಿದ್ನಾಳ ನಿಧನ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ ಚಂದ್ರಪ್ಪ ರುದ್ರಪ್ಪ ಸಿದ್ನಾಳ(60)ಇವರು ಸೋಮವಾರ ಆ.11ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂಧು-ಬಳಗವನ್ನಗಲಿದ್ದಾರೆ. ಸಂತಾಪ:ಬೆಟಗೇರಿ ಗ್ರಾಮದ ನಿವಾಸಿ ಚಂದ್ರಪ್ಪ ರುದ್ರಪ್ಪ ಸಿದ್ನಾಳ ಅವರ ನಿಧನಕ್ಕೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಗಣ್ಯರು, ರಾಜಕೀಯ ಮುಖಂಡರು, ಸ್ಥಳೀಯರು ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.

    Read More »