Breaking News
Home / ಬೆಳಗಾವಿ / ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಸಿದ್ಧಲಿಂಗ ಅಪ್ಪನ ಜಾತ್ರೆಗೆ ಆದಿಚುಂಚನಗಿರಿ ಶ್ರೀಗಳಿಂದ ಚಾಲನೆ

ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಸಿದ್ಧಲಿಂಗ ಅಪ್ಪನ ಜಾತ್ರೆಗೆ ಆದಿಚುಂಚನಗಿರಿ ಶ್ರೀಗಳಿಂದ ಚಾಲನೆ

Spread the love

ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಸಿದ್ಧಲಿಂಗ ಅಪ್ಪನ ಜಾತ್ರೆಗೆ ಆದಿಚುಂಚನಗಿರಿ ಶ್ರೀಗಳಿಂದ ಚಾಲನೆ

ಮೂಡಲಗಿ: ಜ್ಞಾನ ಮತ್ತು ಮುಕ್ತಿ ಪಡೆಯಬೇಕಾದರೆ ಗುರು ಮುಖ್ಯವಾಗಿದ್ದಾನೆ. ವ್ಯಕ್ತಿ, ಮುಕ್ತಿ ಪಡೆಯಬೇಕಾದರೆ ಜ್ಞಾನಬೇಕು ಎಂದು ಆದಿಚುಂಚನಗಿರಿಯ ಪೂಜ್ಯ ಶ್ರೀ ಜಗದ್ಗುರು ನಿರ್ಮಲಾನಂದ ಮಹಾಸ್ವಾಮಿಜಿ ಹೇಳಿದರು.
ಅವರು ಮಂಗಳವಾರದಂದು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಜರುಗುವ ಶ್ರೀ ಸಿದ್ಧಲಿಂಗ ಅಪ್ಪನ ಜಾತ್ರೆ ಹಾಗೂ 26ನೇ ಸತ್ಸಂಗ ಸಮ್ಮೇಳನ ಸಮಾರಂಭಕ್ಕೆ ಸಸಿಗೆ ನಿರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಸಂತರು ಇದ್ದಲ್ಲಿ ಸಂತಸ ಇರುತ್ತದೆ. ಸಂಪತ್ತು ಇದ್ದಲ್ಲಿ ಸಂತಾಪ ಇರುತ್ತದೆ. ನಿಜವಾದ ಸಂಪತ್ತು, ಸಂತಸ ಸಿಗುವುದು ಗುರವಿನಲ್ಲಿ ಮಾತ್ರ. ಉತ್ತರ ಕರ್ನಾಟಕದಲ್ಲಿ ಸಂತರು, ಮಠಾಧೀಶರು ಅಧಿಕವಾಗಿದ್ದಾರೆ. ಅದು ನಮ್ಮ ನಾಡಿನ ಹೆಮ್ಮೆಯಾಗಿದೆ. ಅಧ್ಯಾತ್ಮಿಕವಾಗಿ ಸಾಧನೆ ಮಾಡಬೇಕಾದರೂ ಸಹ ಜ್ಞಾನ ಅತ್ಯಂತ ಅವಶ್ಯವಾಗಿದೆ. ಈ ಭಾಗದ ಭಕ್ತರಿಗೆ ಶ್ರೀ ನಿಜಗುಣ ದೇವ ಮಹಾಸ್ವಾಮಿಜಿಯವರು ದೇವ ರೂಪದಲ್ಲಿ ಗುರುಗಳಾಗಿ ಬಂದು ಶ್ರೀಮಠದಲ್ಲಿ ಅನ್ನದಾಸೋಹದ ಜೊತೆಗೆ ಜ್ಞಾನ ದಾಸೋಹವನ್ನು ನೀಡಿ ಭಕ್ತರ ಹಾಗೂ ಜನರ ಮನಸ್ಸುಗಳಿಸಿಕೊಂಡಿದ್ದಾರೆ. ಇಂತಹ ಸಮಾರಂಭದಲ್ಲಿ ನಾಡಿನ ಶ್ರೇಷ್ಠ ಸಂತರು, ಮಹಾತ್ಮರು, ಅನುಭಾವಿಗಳು ಆಗಮಿಸಿದ್ದು ಅವರ ದರ್ಶನ ಪಡೆದು ಅವರ ಮಾತುಗಳನ್ನು ಕೇಳುವುದೇ ಪುಣ್ಯ ಎಂದರಲ್ಲದೇ ಭಗವಂತನ ಸ್ಮರಣೆ ಅಗತ್ಯವಾಗಿದೆ. ಗುರುವಿನ ಮತ್ತು ಶಿಷ್ಯನ ಸಂಬಂಧ ಅಪಾರವಾದದ್ದು ಆದ್ದರಿಂದ ನಿಜಗುಣ ದೇವ ಮಹಾಸ್ವಾಮಿಗಳು ಗುರುವಿನ ಕೃಪಾ ಆಶೀರ್ವಾದದಿಂದ ಶ್ರೀಮಠವು ಸಮಾಜಸೇವೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಂಗಕ್ಕೆ ಒಯ್ಯುತ್ತಿದ್ದಾರೆ. ಘಟದಿಂದ ಮಠ ಬೆಳೆಯುವುದಕ್ಕೆ ಶ್ರೀಮಠವೇ ನಿದರ್ಶನವಾಗಿದೆ.
ಇದೇ ಸಂದರ್ಭದಲ್ಲಿ ಶ್ರೀ ನಿಜಗುಣ ದೇವ ಮಹಾಸ್ವಾಮಿಜಿಯವರಿಂದ ಆದಿಚುಂಚನಗಿರಿಯ ಪೂಜ್ಯ ಶ್ರೀ ಜಗದ್ಗುರು ನಿರ್ಮಲಾನಂದ ಮಹಾಸ್ವಾಮಿಜಿಯವರಿಗೆ ಸನ್ಮಾನಿಸಲಾಯಿತು. ಪೂಜ್ಯರು ಸೇರಿದಂತೆ ಸದ್ಭಕ್ತರು, ಗಣ್ಯರು ಉಪಸ್ಥಿತರಿದ್ದರು. ಬೀದರಿನ ಗಣೇಶ ಮಹಾರಾಜರು ಕಾರ್ಯಕ್ರಮವನ್ನು ನಿರೂಪಿಸಿದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ