ಆ.29 ರಂದು ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ 109 ವರ್ಷಗಳ ಪೂರೈಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಆ.29 ರಂದು ಸೋಮವಾರದಂದು ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗಲಿದೆ ಎಂದು ಸಂಘದ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಹೇಳಿದರು.
ಅವರು ಶನಿವಾರದಂದು ಕಲ್ಲೋಳಿ ಪಟ್ಟಣದ ಸಂಘದ ಸಭಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾವನ ಸಾನಿಧ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು, ದಿವ್ಯಸಾನಿಧ್ಯ ಅರಭಾವಿಪುಣ್ಯಾರಣ್ಯ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ, ಇಂಚಲದ ಶ್ರೀ ಶಿವಾನಂದ ಭಾರತಿ ಮಹಾಸ್ವಾಮಿಗಳು, ಗೋಕಾಕ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು, ಸುಣಧೋಳಿ ಜಡಿಸಿದ್ಧೇಶ್ವರ ಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳು ವಹಿಸುವರು, ಉದ್ಘಾಟಕರಾಗಿ ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಲ ಜಾರಕಿಹೋಳಿ ಭಾಗವಹಿಸುವರು, ಸಂಘದ ಅಧ್ಯಕ್ಷ ಈರಪ್ಪ ಶಿ. ಹೆಬ್ಬಾಳ ಅಧ್ಯಕ್ಷತೆ ವಹಿಸುವರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಜ್ಯೋತಿ ಬೆಳಗಿಸುವವರು, ಮುಖ್ಯಅತಿಥಿಗಳಾಗಿ ಮಾಜಿ ಜಿ.ಪಂ ಅಧ್ಯಕ್ಷ ಬಸಗೌಡ ಪಾಟೀಲ, ಪ.ಪಂ ಸದಸ್ಯರಾದ ಸುಭಾಷ ಕುರಬೇಟ, ಮಲ್ಲಪ್ಪ ಹೆಬ್ಬಾಳ, ಪ್ರಥಮ ದರ್ಜೆ ಗುತ್ತಿಗೆದಾರ ಬಸವಂತ ದಾಸವನವರ ಭಾಗವಹಿಸುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘ ಅಧ್ಯಕ್ಷ ಈರಪ್ಪ ಶಿ.ಹೆಬ್ಬಾಳ, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಬಸವರಾಜ ಬಾಗೇವಾಡಿ ಮತ್ತಿತರರು ಇದ್ದರು.