Breaking News
Home / Recent Posts / ಕಲ್ಲೋಳಿಯ ಬಸಗೌಡ ಪಾಟೀಲ ಅವರಿಗೆ ಮಾತೃವಿಯೋಗ

ಕಲ್ಲೋಳಿಯ ಬಸಗೌಡ ಪಾಟೀಲ ಅವರಿಗೆ ಮಾತೃವಿಯೋಗ

Spread the love

ಕಲ್ಲೋಳಿಯ ಬಸಗೌಡ ಪಾಟೀಲ ಅವರಿಗೆ ಮಾತೃವಿಯೋಗ

ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಬಸಗೌಡ ಪಾಟೀಲ ಅವರ ತಾಯಿ ಶತಾಯುಷಿ ಅಲ್ಲವ್ವ ಶಿವಗೌಡ ಪಾಟೀಲ ಬುಧವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರು ಕಲ್ಲೋಳಿಯ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿ 50 ವರ್ಷಗಳ ವರೆಗೆ ಅನುಪಮ ಸೇವೆ ಸಲ್ಲಿಸಿದ್ದಾರೆ.
ಬುಧವಾರ ಬೆಳಿಗ್ಗೆ ತೋಟದಲ್ಲಿ ಜರುಗಿದ ಅಂತ್ಯಕ್ರಿಯೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಸಚಿವ ಆರ್.ಎಂ. ಪಾಟೀಲ, ಕರ್ನಾಟಕ ರಾಜ್ಯ ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಬಿ.ಬಿ. ಬೆಳಕೂಡ, ಟಿಡಿಬಿ ಮಾಜಿ ಅದ್ಯಕ್ಷ ಬಿ.ಎಸ್. ಗೋರೋಶಿ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಗಣ್ಯರು ಭಾಗವಹಿಸಿದ್ದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ