ಮೂಡಲಗಿ: ಭ್ರಷ್ಟಾಚಾರಮುಕ್ತ, ಸ್ವಚ್ಛ ಹಾಗೂ ಸಧೃಢ, ಸಶಕ್ತ ಭಾರತ ನಿರ್ಮಾಣವಾಗಬೇಕು. ಭ್ರಷ್ಟಾಚಾರ ನಮ್ಮ ದೇಶಕ್ಕೆ ಅಂಟಿದ ಕಳಂಕ. ಯುವಜನತೆ ಭ್ರಷ್ಟಾಚಾರ ವಿರೋಧಿ ಆಂದೋಲನವನ್ನು ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಗೋಕಾಕದ ಮಲ್ಲಪ್ಪ ಜೋತಾವರ ಕರೆ ನೀಡಿದರು.
ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಕಲ್ಲೋಳಿಯ ವೀರಭದ್ರೇಶ್ವರ ಜಾನಪದ ಮತ್ತು ಕಲಾಫೋಷಕ ಸಂಘ ಹಾಗೂ ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಎನ್ನೆಸ್ಸೆಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಜರುಗಿದ 2024-25 ನೇ ಸಾಲಿನ ವಿಚಕ್ಷಣ ದಿನಾಚರಣೆ ಹಾಗೂ ಫಿಟ್ ಇಂಡಿಯಾ ಸ್ವಚ್ಛತಾ ಫ್ರೀಡಂ ರನ್ 5.0 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪ್ರಾಮಾಣಿಕತೆ ಮತ್ತು ನಿμÉ್ಠಯನ್ನು ನಮ್ಮಲ್ಲಿ ಅಳವಡಿಸಿಕೊಂಡು ಲಂಚ ತೆಗೆದುಕೊಳ್ಳುವುದಿಲ್ಲ ಮತ್ತು ಕೊಡುವುದಿಲ್ಲ ಎಂಬ ಶಪತ ಮಾಡೋಣ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್.ಆರ್.ಇ. ಸಂಸ್ಥೆಯ ಚೇರಮನ್ನ ಬಸಗೌಡ ಪಾಟೀಲ ಮಾತನಾಡಿ, ಸಮಾಜವನ್ನು ಸರಿದಾರಿಯಲ್ಲಿ ನಡೆಸುವ ಜವಾಬ್ದಾರಿ ಯುವಕರ ಮೇಲಿದೆ. ಸರ್ಕಾರಿ ಕೆಲಸ ಮಾಡಲು ಹಿಂದೇಟು ಹಾಕುವವರ ವಿರುದ್ಧ, ಲಂಚದ ಬೇಡಿಕೆಯಿಡುವವರ ವಿರುದ್ಧ, ಅಕ್ರಮ ಸಂಪತ್ತು ಹೊಂದಿರುವವರ ವಿರುದ್ಧ ದೂರು ಸಲ್ಲಿಸಬೇಕು. ಲಂಚ ಪಡೆದುಕೊಳ್ಳುವುದು, ಲಂಚ ನೀಡುವುದು ಕಾನೂನು ಪ್ರಕಾರ ಅಪರಾಧ. ಇದರಲ್ಲಿ ಭಾಗಿಯಾದವರಿಗೆ ಜೈಲು ಶಿಕ್ಷೆಯಾಗುತ್ತದೆ ಹಾಗೂ ಕೆಲಸದಿಂದ ವಜಾಗೊಳಿಸಬಹುದು. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ವಿದ್ಯಾರ್ಥಿಗಳಿಂದ ಆಗಬೇಕಿದೆ.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಮಾತನಾಡಿ, ಭ್ರಷ್ಟಾಚಾರವೆಂಬ ಸಾಮಾಜಿಕ ಪಿಡುಗು ಭಾರತದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದ್ದು, ಅಭಿವೃದ್ಧಿ ಹೊಂದಿದ ರಾಷ್ಟ್ರದ ನಿರ್ಮಾಣಕ್ಕಾಗಿ ಭ್ರಷ್ಟಾಚಾರದ ಸಂಪೂರ್ಣ ನಿರ್ಮೂಲನೆ ಅತ್ಯಗತ್ಯ ಎಂದರು.
ಕಲ್ಲೋಳಿಯ ವೀರಭದ್ರೇಶ್ವರ ಜಾನಪದ ಮತ್ತು ಕಲಾ ಪೋಷಕ ಯುವಕ ಸಂಘದ ಅಧ್ಯಕ್ಷ ಗುಳಪ್ಪ ವಿಜಯನಗರ ಪ್ರಾಸ್ತವಿಕ ಮಾತುಗಳನ್ನಾಡಿದರು.
ಕಾಲೇಜಿನ ಐಕ್ಯೂಎಸಿ ಘಟಕದ ಕಾರ್ಯದರ್ಶಿ ಡಾ. ಎಂ.ಬಿ. ಕುಲಮೂರ, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಶಂಕರ ನಿಂಗನೂರ, ಬಿ.ಬಿ. ವಾಲಿ, ಬೋಧಕ/ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೋ, ಆರ್. ಎನ್. ತೋಟಗಿ ನಿರೂಪಿಸಿದರು, ಸಂಜು ಮರಗನ್ನವರ ಪ್ರಾರ್ಥಿಸಿದರು, ಡಾ. ಕೆ.ಎಸ್. ಪರವ್ವಗೋಳ ಸ್ವಾಗತಿಸಿದರು, ಡಿ.ಎಸ್. ಹುಗ್ಗಿ ಪ್ರತಿಜ್ಞಾ ವಿಧಿ ಬೋಧಿಸಿದರು, ಎಂ.ಬಿ. ಜಾಲಗಾರ ವಂದಿಸಿದರು.
Check Also
ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ
Spread the love ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು …