ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕ- ಕಡಾಡಿ
ಮೂಡಲಗಿ: ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ. ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ ಎಂದು ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ಅಧ್ಯಕ್ಷ ಬಸವರಾಜ ಕಡಾಡಿ ಅವರು ಹೇಳಿದರು.
ಶುಕ್ರವಾರ ನ.11 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಹಾಗೂ ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ 535ನೇ ಭಕ್ತ ಕನಕದಾಸರ ಜಯಂತಿ ನಿಮಿತ್ಯ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಮಾಡಿ. ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು ದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರು ಕನಕದಾಸರು. ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರು. ವಿಶ್ವ ಮಾನವ ಕಲ್ಪನೆ ಹೊಂದಿದ್ದ ಮಾನವೀಯ ಗುಣಗಳನ್ನು ಪ್ರತಿಪಾದಿಸಿ, ಸಮಾನತೆ ಸಾರಿದರು ಎಂದರು.
ಈ ಸಂದರ್ಭದಲ್ಲಿ ಸಹಕಾರಿಯ ನಿರ್ದೆಶಕ ಪರಪ್ಪ ಮಳವಾಡ, ಸಹದೇವ ಹೆಬ್ಬಾಳ, ಶಿವಪ್ಪ ಗೋಸಬಾಳ, ಶಿವಗೊಂಡಪ್ಪ ವ್ಯಾಪಾರಿ, ಮಲ್ಲಿಕಾರ್ಜುನ ಹುಲೆನ್ನವರ, ಸೋಮನಿಂಗ ಹಡಗಿನಾಳ, ಸೇವಾ ನಿರ್ದೇಶಕ ಸಿದ್ದಪ್ಪ ಹೆಬ್ಬಾಳ, ಸಂತೋಷ ಬಡಿಗೇರ, ಸಹಕಾರಿ ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ಶಾಖಾ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ, ಶಂಕರ ಕೌಜಲಗಿ, ದೊಡ್ಡಪ್ಪ ಉಜ್ಜನಕೊಪ್ಪ, ಸೇವಾ ಸಂಸ್ಥೆಯ ಸಂಯೋಜಕ ಕಿರಣ ಹೊಸಮನಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಸಹಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.