ಕಲಬುರಗಿ: ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ ರಷ್ಟು ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ದೇಶ ಎಲ್ಲಾ ರಾಜ್ಯಗಳಿಗೆ ಆದೇಶ ಮಾಡಿ ಮೂರು ವರ್ಷ ಕಳೆದರೂ ಕೂಡಾ ರಾಜ್ಯ ಸರಕಾರವು ಬಡ್ತಿ ಮೀಸಲಾತಿಗೆ ಸಂಬಂಧಿಸಿದ ಯಾವುದೇ ಆದೇಶ ಜಾರಿಗೆ ಮಾಡದಿರುವುದರ ಕುರಿತು ಸದನದಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಿಧಾನ ಪರಿಷತ್ತಿನ ಸದಸ್ಯರಾದ ಶಶಿಲ್.ಜಿ.ನಮೋಶಿ ಅವರಿಗೆ ಕಲಬುರಗಿಯಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ವಿಕಲಚೇತನ ನೌಕರರಿಗೆ ಸುಪ್ರೀಂಕೋರ್ಟ್ ಆದೇಶದಂತೆ ಶೇಕಡಾ ೩ರಷ್ಟು ಬಡ್ತಿಯಲ್ಲಿ ಮೀಸಲಾತಿ ಆದೇಶ ಜಾರಿಗೆ ಮಾಡುವಂತೆ ಆದೇಶ ಮಾಡಿ ಮೂರು ವರ್ಷ ಕಳೆದರೂ ಕೂಡಾ ಯಾವುದೇ ಆದೇಶ ರಾಜ್ಯ ಸರಕಾರವು ಜಾರಿಗೆ ಮಾಡದಿರುವುದು ಖಂಡನೀಯ ಸಂಗತಿಯಾಗಿದೆ. ಈ ವಿಷಯದ ಕುರಿತು ಈಗಾಗಲೇ ವಿಕಲಚೇತನ ನೌಕರರ ಸಂಘದ ವತಿಯಿಂದ ಆದೇಶ ಜಾರಿಗೆ ಮಾಡುವಂತೆ ಅನೇಕ ಭಾರಿ ಮನವಿ ಪತ್ರವನ್ನು ಸಲ್ಲಿಸಿದರು ಕೂಡಾ ಯಾವುದೇ ಪ್ರಯೋಜನ ಆಗಿಲ್ಲಾ.ಅಲ್ಲದೇ ಈಗಾಗಲೇ ಅನೇಕ ಇಲಾಖೆಗಳಲ್ಲಿ ಬಡ್ತಿ ನೀಡಿದ್ದರೆ ಹಾಗೂ ಬಡ್ತಿ ನೀಡುವ ಸಂಬಂಧ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.ಆದೇಶ ಜಾರಿಯಾಗದ ಹಿನ್ನೆಲೆಯಲ್ಲಿ ವಿಕಲಚೇತನ ನೌಕರರು ಬಡ್ತಿ ಸೌಲಭ್ಯದಿಂದ ವಂಚಿತರಾತ್ತಿದ್ದಾರೆ.ಆದರಿಂದ ತಾವು ಕೂಡಲೇ ಬಡ್ತಿ ಮೀಸಲಾತಿ ಆದೇಶ ಜಾರಿಗೆ ಮಾಡುವಂತೆ ಸರಕಾರಕ್ಕೆ ಒತ್ತಾಯ ಮಾಡುವುದರ ಜೊತೆಯಲ್ಲಿ ಸದನದಲ್ಲಿ ಈ ವಿಷಯ ಕುರಿತು ಚರ್ಚೆ ಮಾಡುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ,ವಿಧಾನ ಪರಿಷತ್ತಿನ ಸದಸ್ಯರಾದ ಶಶಿಲ್.ಜಿ.ನಮೋಶಿ ಮಾತನಾಡುತ್ತಾ,ವಿಕಲಚೇತನ ನೌಕರರಿಗೆ ಬಡ್ತಿ ಮೀಸಲಾತಿ ಆದೇಶ ಜಾರಿಗೆ ಮಾಡದಿರುವುದು ನೋವಿನ ಸಂಗತಿಯಾಗಿದೆ.ಈ ಕುರಿತು ಸರಕಾರಕ್ಕೆ ಒತ್ತಾಯ ಮಾಡುವುದರ ಜೊತೆಗೆ ಸದನದಲ್ಲಿ ಪ್ರಶ್ನೆ ಮಾಡುವುದಾಗಿ ಭರವಸೆ ನೀಡಿದರು.
ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಯ್ಯಾಸ್ವಾಮಿ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಯ್ಯಾ ಪೂಜಾರ,ನಿರ್ದೇಶಕರಾದ ಬೀರಪ್ಪ ಮುಂತಾದವರು ಹಾಜರಿದ್ದರು.
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …