Breaking News
Home / Recent Posts / ಪ್ರತಿಯೊಬ್ಬ ವ್ಯಕ್ತಿಯು ಕೂಡಾ ತನಗೆ ವಹಿಸಿರುವ ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ- ಬೀರಪ್ಪ ಅಂಡಗಿ

ಪ್ರತಿಯೊಬ್ಬ ವ್ಯಕ್ತಿಯು ಕೂಡಾ ತನಗೆ ವಹಿಸಿರುವ ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ- ಬೀರಪ್ಪ ಅಂಡಗಿ

Spread the love

ಕೊಪ್ಪಳ: ಪ್ರತಿಯೊಬ್ಬ ವ್ಯಕ್ತಿಯು ಕೂಡಾ ತನಗೆ ವಹಿಸಿರುವ ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು.
ಅವರು ನಗರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿಗೆ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕವಾದ ಶ್ರೀನಿವಾಸ ಚಿತ್ರಗಾರ ಅವರಿಗೆ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಅಥಿಗಳಾಗಿ ಆಗಮಿಸಿ ಮಾತನಾಡುತ್ತಾ,ಪ್ರತಿಯೊಬ್ಬರು ತಮಗೆ ವಹಿಸಲಾದ ಹುದ್ದೆಗೆ ಅನುಗುಣವಾಗಿ ಕೆಲಸ ಮಾಡಿದಾಗ ಮಾತ್ರ ಆ ಹುದ್ದೆಗೆ ಹೆಚ್ಚಿನ ಮಹತ್ವ ಬರಲು ಸಾಧ್ಯವಾಗುತ್ತದೆ.ಹುದ್ದೆಯಲ್ಲಿ ಎಷ್ಟು ದಿನಗಳ ಕಾಲ ಕೆಲಸ ಮಾಡಿದ್ದವೇ ಎಂಬುದು ಮುಖ್ಯವಾಗುವುದಿಲ್ಲ.ಆ ಹುದ್ದೆಯಲ್ಲಿ ಇರುವ ಸಮಯದಲ್ಲಿ ಮಾಡಿದ ಕಾರ್ಯಗಳು ಮಾತ್ರ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತವೆ.ಚುಟುಕು ಸಾಹಿತ್ಯ ಕೂಡಾ ಒಂದು ಪ್ರಕಾರದ ಸಾಹಿತ್ಯವಾಗಿದೆ.ಪ್ರಸ್ತುತ ದಿನಮಾನಗಳಲ್ಲಿ ಪುಸ್ತಕಗಳನ್ನು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆಯಾಗಿದೆ.ಚುಟುಕು ಸಾಹಿತ್ಯ ಮೂಲಕವಾದರೂ ಕೂಡಾ ಪುಸ್ತಕಗಳನ್ನು ಓದುವ ಅವ್ಯಾಸವನ್ನು ಬೆಳೆಸು ಕಾರ್ಯವಾಗಲಿ ಎಂದು ಹೇಳಿದರು.
ಮುಖ್ಯ ಅಥಿಗಳಾಗಿ ಆಗಮಿಸಿದ್ದ ಯಲಬುರ್ಗಾ ತಾಲೂಕಿನ ಶಿರೂರ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಎಚ್.ಎಸ್.ಶಿವರಡ್ಡಿ ಮಾತನಾಡುತ್ತಾ,ಹಲವಾರು ಕೃತಿಗಳನ್ನು ಬರೆದಿರುವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಸೂಕ್ತವಾಗಿದೆ.ಜಿಲ್ಲೆಯಲ್ಲಿ ಅನೇಕ ಸಾಹಿತಿಗಳಿದ್ದು ಅವರ ಮಾರ್ಗದರ್ಶ ಹಾಗೂ ಸಲಹೆಯೊಂದಿಗೆ ಎಲ್ಲರನ್ನು ಒಂದು ವೇದಿಕೆಯಲ್ಲಿ ತರುವಂತ ಕೆಲಸ ಮಾಡಲಿ.ಉತ್ತಮ ಕೆಲಸ ಮಾಡುವ ಮೂಲಕ ಇತರೇ ಸಂಘಟನೆಗಳಿಗೆ ಮಾದರಿಯಾಗಲಿ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿದ ಬಳಿಕ ನೂತನ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶ್ರೀನಿವಾಸ ಚಿತ್ರಗಾರ ಮಾತನಾಡಿ,ಸನ್ಮಾನ ಮಾಡುವ ಮೂಲಕ ನನ್ನ ಜವಾಬ್ದಾರಿಯನ್ನು ಹೆಚ್ಚು ಮಾಡಿದ್ದರಿ.ಹುದ್ದೆಗೆ ಯಾವುದೇ ರೀತಿಯಲ್ಲಿ ಕಳಂಕ ಬರದ ರೀತಿಯಲ್ಲಿ ಕೆಲಸ ಮಾಡುವುದರ ಜೊತೆಗೆ ಚುಟುಕು ಸಾಹಿತ್ಯವನ್ನು ಬಲಪಡಿಸುವ ಕಾರ್ಯವನ್ನು ಮಾಡುತ್ತೆನೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಶಿಕ್ಷಕರಾದ ಮಹೇಶಗೌಡ ಪಾಟೀಲ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಅಶೋಕ ಕಂಚಗಾರ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಅಂದಪ್ಪ ಬೋಳರಡ್ಡಿ,ಶಿಕ್ಷಕರಾದ ನಾನು ಪಾಟೀಲ,ವಿಜಯಲಕ್ಷಿö್ಮÃ,ಶ್ರೀದೇವಿ ಮುಂತಾದವರು ಹಾಜರಿದ್ದರು.
ಕಾರ್ಯಕ್ರಮವನ್ನು ದೈಹಿಕ ಶಿಕ್ಷಕರಾದ ಅಶೋಕ ಕಾತರಕಿ ನಿರೂಪಿಸಿದರು.
ಶಿಕ್ಷಕಿ ನಾಗರತ್ನ ಸ್ವಾಗತಿಸಿ,ಶಶಿಕಲಾ ವಂದಿಸಿದರು.


Spread the love

About inmudalgi

Check Also

ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

Spread the loveಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ  ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ