Breaking News
Home / Recent Posts / 24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ

24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ

Spread the love

ಮೂಡಲಗಿ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಘಟಕ ಬೆಂಗಳೂರು ಹಾಗೂ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸೆ. 24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಕನ್ನಡ ಮತ್ತು ಆಂಗ್ಲ ಮಾಧ್ಯಮದ ಸರ್ಕಾರಿ, ಅನುದಾನಿತ, ಖಾಸಗಿ ಪ್ರೌಢ ಶಾಲೆಗಳ ಮಕ್ಕಳು sಸೆ.22ರ ಒಳಗಾಗಿ ಜಿಲ್ಲಾ ಮತ್ತು ತಾಲೂಕಾ ಸಂಯೋಜಕರ ಮೂಲಕ 40 ರೂ, ಪ್ರವೇಶ ಶುಲ್ಕ ನೀಡಿ ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಸಂಯೋಜಕ ಬಸವರಾಜ ಭಜಂತ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್‍ಲೈನ್ ರಸಪ್ರಶ್ನೆ ಒಟ್ಟು 50 ಪ್ರಶ್ನೆಗಳಿದ್ದು, 30 ನಿಮಷಗಳ ಒಳಗಾಗಿ ಯಾರು ಕಡಿಮೆ ಸಮಯದಲ್ಲಿ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಬಹುಮಾನಗಳನ್ನು ಮೂರು ಭಾಗವಾಗಿ ವಿಂಗಡಿಸಿ ನಗದು ಜೊತೆಗೆ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು. ಹಾಗೂ ಇನ್ನೂಳಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪ್ರಮಾಣ ಪತ್ರಗಳನ್ನು ನೀಡಲಾಗುವುದು ಆದ್ದರಿಂದ ಬೆಳಗಾವಿ ಜಿಲ್ಲೆಯ ಪ್ರೌಢ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 9980149774 ಸಂಕಿರ್ಪಸಬಹುದು ಎಂದು ತಿಳಿಸಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ