Breaking News
Home / Recent Posts / ಕುಲಗೋಡದಲ್ಲಿ ಸ್ವಚ್ಛಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಆರೋಗ್ಯ ಶಿಬಿರ ಉದ್ಘಾಟನೆ

ಕುಲಗೋಡದಲ್ಲಿ ಸ್ವಚ್ಛಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಆರೋಗ್ಯ ಶಿಬಿರ ಉದ್ಘಾಟನೆ

Spread the love

 

ಮೂಡಲಗಿ: ಇಂದಿನ ದಿನಗಳಲ್ಲಿ 35 ವರ್ಷದೊಳಗೆ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದನ್ನು ತಡೆಗಟ್ಟು ನಿಟ್ಟಿನಲ್ಲಿ ಉತ್ತಮ ಆಹಾರ, ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಮೂಡಲಗಿ ತಾಲೂಕಾ ಪಂಚಾಯತ ಇಒ ಎಫ್.ಜಿ.ಚಿನ್ನನವರ ಅವರು ತಿಳಿಸಿದರು.
ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶುಕ್ರವಾರ ಮನರೇಗಾ ಯೋಜನೆಯಡಿ ಸ್ವಚ್ಛಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಆರೋಗ್ಯದಿಂದ ಇರಬೇಕಾದರೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ರಾಸಾಯನಿಕ ಮುಕ್ತ ಆಹಾರ ಸೇವನೆ ಮಾಡಬೇಕು. ಜತೆಗೆ ವ್ಯಾಯಾಮವನ್ನು ದಿನದ ಚಟುವಟಿಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪಿಡಿಒ ಸದಾಶಿವ ದೇವರ ಮಾತನಾಡಿ, ಸ್ವಚ್ಛತೆಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಮಲ್ಲಿಕಾರ್ಜುನ ಅವರು ಮಾತನಾಡಿ, ಒತ್ತಡದಲ್ಲಿ ಜೀವನ ನಡೆಸುತ್ತಿದ್ದೇವೆ. ಇದರಿಂದ ಅನೇಕ ರೋಗಗಳು ಬರುತ್ತಿವೆ. ಹಾಗಾಗಿ ಒತ್ತಡದ ಜೀವನ ನಡೆಸದೇ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಇದೇ ವೇಳೆ ಅಮೃತ ಸರೋವರದ ದಡದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ತಮ್ಮಣ್ಣ ದೇವರ, ಸದಸ್ಯರಾದ ಬಸವರಾಜ ಯರಗಟ್ಟಿ, ಶೋಬಾ ಪೂಜಾರಿ, ಗೌರವ್ವಾ ಸಮಗಾರ ಹಾಗೂ ಗ್ರಾಪಂ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ