ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 83ನೇ ಅನ್ನದಾಸೋಹ
‘ಅನ್ನದಾನವು ಶ್ರೇಷ್ಠ ದಾನವಾಗಿದೆ’
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 83ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು.
ಅತಿಥಿ ಮೂಡಲಗಿಯ ಸಾಯಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರವೀಣ ಕುಲಗೋಡ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು.
ಲಯನ್ಸ್ ಕ್ಲಬ್‍ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ ಅನ್ನದಾಸೋಹ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಇದು ಇತರ ಸಂಸ್ಥೆಗಳಿಗೆ ಮಾದರೆಯೆನಿಸಿದೆ ಎಂದರು.
ಲಯನ್ಸ್ ಕ್ಲಬ್ ಸದಸ್ಯ ಪುಲಕೇಶ ಸೋನವಾಲಕರ ತಮ್ಮ ಪುತ್ರ ಸುಮಂತ ಅವರ 24ನೇ ಜನ್ಮದಿನ ಆಚರಣೆಗಾಗಿ ಅನ್ನದಾಸೋಹವನ್ನು ಏರ್ಪಡಿಸಿದ್ದರು.
ಸಮುದಾಯ ಆರೋಗ್ಯ ಕೇಂದ್ರ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಅತಿಥಿಯಾಗಿ ಭಾಗವಹಿಸಿದ್ದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಶೈಲ್ ಲೋಕನ್ನವರ ಪ್ರಾಸ್ತಾವಿಕ ಮಾತನಾಡಿ ಪ್ರತಿ ತಿಂಗಳು ಎರಡು ಬಾರಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅನ್ನದಾಸೋಹವನ್ನು ಏರ್ಪಡಿಸಲಾಗುತ್ತಿದೆ ಎಂದರು.
ಕಾರ್ಯದರ್ಶಿ ಸುಪ್ರೀತ ಸೋನವಾಲಕರ ಪ್ರಾಸ್ತಾವಿಕ ಮಾತನಾಡಿದರು.
400ಕ್ಕೂ ಅಧಿಕ ಸಂಖ್ಯೆಯಲ್ಲಿ ಆಸ್ಪತ್ರೆಯ ಆರೋಗ್ಯ ತಪಾಸಣೆ ಬಂದಿದ್ದ ಸಾರ್ವಜನಿಕರು ಮತ್ತು ಅವರ ಸಂಬಂಧಿಕರು ಅನ್ನದಾಸೋಹದಲ್ಲಿ ಭಾಗಹಿಸಿದ್ದರು.
ವೆಂಕಟೇಶ ಸೋನವಾಲಕರ, ಶಿವಾನಂದ ಗಾಡವಿ, ಸಂಜಯ ಮೋಕಾಶಿ, ಬಾಲಶೇಖರ ಬಂದಿ, ಡಾ. ಸಚಿನ ಟಿ, ಮಹಾಂತೇಶ ಹೊಸೂರ, ಅಪ್ಪಣ್ಣ ಬಡಿಗೇರ, ಸಂಗಮೇಶ ಕೌಜಲಗಿ, ಡಾ. ಸಂಜಯ ಶಿಂಧಿಹಟ್ಟಿ ಇದ್ದರು. ಖಜಾಂಚಿ ಕೃಷ್ಣಾ ಕೆಂಪಸತ್ತಿ ವಂದಿಸಿದರು.