ಸುಗ್ಗಿ ಸಂಭ್ರಮ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಿಂದ ಗ್ರಾಮೀಣ ಬದುಕಿನ ಅನಾವರಣದ “ಸುಗ್ಗಿ ಸಂಭ್ರಮ” ಕಾರ್ಯಕ್ರಮ ಬುಧವಾರ ಜ.8 ರಂದು ಮುಂಜಾಣೆ 10 ಗಂಟೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಎಮ್.ಎಸ್.ಪಾಟೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್.ಸೋನವಾಲಕರ ವಹಿಸುವರು, ಮುಖ್ಯ ಅತಿಥಿಗಳಾಗಿ ಸಸಾಲಟ್ಟಿಯ ಜಾನಪದ ಕಲಾವಿದ ಹಾಗೂ ಶಿಕ್ಷಕ ಶಿವಲಿಂಗಪ್ಪ ಪಿ.ಹೊಸಪೇಟ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಆರ್.ಪಿ.ಸೋನವಾಲಕರ ಭಾಗವಹಿಸುವರು.