Breaking News
Home / ಬೆಳಗಾವಿ / ‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿ ಇದೆ”- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿ ಇದೆ”- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

Spread the love

ಮೂಡಲಗಿ: ‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯು ಮುಖ್ಯವಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.
ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ನರ್ಸರಿ ಶಾಲೆ ಉದ್ಘಾಟನೆ ಮತ್ತು ಪಾಲಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ದೇಶದ ಭವಿಷ್ಯದ ರೂವಾರಿಗಳಾಗುವ ಮಕ್ಕಳನ್ನು ನಿರ್ಲಕ್ಷಿಸಬಾರದು ಎಂದರು.
ಪ್ರಾಥಮಿಕ ಶಾಲಾ ಹಂತದಲ್ಲಿರುವ ಮಕ್ಕಳ ಮೇಲೆ ಹೆಚ್ಚು ಪ್ರೀತಿ ಇರಬೇಕು. ಬೆಳೆಯುತ್ತಾ ಹೊದಂತೆ ಹಣದ ಮತ್ತು ಶ್ರಮದ ಬೆಲೆ ಗೊತ್ತು ಮಾಡಬೇಕು. ಮನೆಯಲ್ಲಿ ಸಂಸ್ಕಾರ ಕಲಿಸಬೇಕು ಎಂದು ಪಾಲಕರಿಗೆ ಕಿವಿಮಾತು ಹೇಳಿದರು.
ಏಳು ದಶಕಗಳ ಇತಿಹಾಸವನ್ನು ಹೊಂದಿರುವ ಮೂಡಲಗಿ ಶಿಕ್ಷಣ ಸಂಸ್ಥೆಯು ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿರುವ ಸಂಸ್ಥೆ ಎನ್ನುವ ಹೆಗ್ಗಳಿಕೆ ಹೊಂದಿದೆ. ಈ ಸಂಸ್ಥೆಯ ಶಾಲೆ, ಕಾಲೇಜುಗಳಲ್ಲಿ ಕಲಿತ ಸಾವಿರ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂಸ್ಥೆಯು ನೂತನವಾಗಿ ಪ್ರಾರಂಭಿಸಿರುವ ನರ್ಸರಿ ಶಾಲೆ ಮತ್ತು ಪ್ರಾಥಮಿಕ ಶಾಲೆಗೆ ವಿನೂತನ ಕಲಿಕಾ ಪರಿಕgಗಳÀ ಮೂಲಕ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವೆವು ಎಂದರು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರತಿಭಾವಂತ ಶಿಕ್ಷಕ ವೃಂದವನ್ನು ನೇಮಕ ಮಾಡಿಕೊಂಡಿರುವುದರಿಂದ ಮಕ್ಕಳಿಗೆ ಇನ್ನಷ್ಟು ಅಧಿಕ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಎಲ್.ಚಿತ್ರಗಾರ, ಉಪನ್ಯಾಸಕ ಬಿ.ಜಿ. ಗಡಾದ, ಬಾಳಪ್ಪ ಚಂದರಗಿ, ಶಿಕ್ಷಕ ಅನಿಲ ಹುಚರಡ್ಡಿ ವೇದಿಕೆಂiÀiಲ್ಲಿದ್ದರು.
ಅಕ್ಷತಾ ಪಾಟೀಲ ಸ್ವಾಗತಿಸಿದರು, ಅಮೃತಾ ಪಾಟೀಲ ನಿರೂಪಿಸಿದರು, ದಿಶಾರಾಣಿ ವಂದಿಸಿದರು.


Spread the love

About inmudalgi

Check Also

ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ