ಇತ್ತಿಚೆಗೆ ನಿಧನರಾದ ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಹೊಸೂರ ಅವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರದ್ಧಾಂಜಲಿಯನ್ನು ಅರ್ಪಿಸಿದರು.
ಶಿಕ್ಷಣ ಸಂಸ್ಥೆಯಲ್ಲಿ ವೀರಣ್ಣ ಹೊಸೂರ ಅವರಿಗೆ ಶ್ರದ್ಧಾಂಜಲಿ ಅರ್ಪಣೆ
ಮೂಡಲಗಿ: ಇತ್ತಿಚೆಗೆ ನಿಧನರಾದ ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೀರಣ್ಣ ಈಶ್ವರಪ್ಪ ಹೊಸೂರ ಅವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಶ್ರದ್ಧಾಂಜಲಿಯನ್ನು ಅರ್ಪಿಸಿದರು.
ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಸಂಗಮೇಶ ಗುಜಗೊಂಡ ನುಡಿ ನಮನ ಸಲ್ಲಿಸಿ ಮಾತನಾಡಿ ‘ವೀರಣ್ಣ ಹೊಸೂರ ಅವರು ಶಿಕ್ಷಣ ಪ್ರೇಮಿಯಾಗಿದ್ದರು. ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾಗಿ ಶೈಕ್ಷಣಿಕ ಬೆಳವಣಿಗೆಗೆ ಅನುಪಮ ಸೇವೆಯನ್ನು ಸಲ್ಲಿಸಿದಾರೆ’ ಎಂದರು.
ಮೂಡಲಗಿ ಪುರಸಭೆಯ ಅಧ್ಯಕ್ಷರಾಗಿ ಜನಪರ ಹಲವಾರು ಕೆಲಸಗಳನ್ನು ಮಾಡಿದ್ದು, ಕ್ರೀಡೆ, ಸಾಂಸ್ಕøತಿಕ, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಿಗೆ ಕೊಡುಗೈ ದಾನಿಗಳಾಗಿದ್ದರು ಎಂದರು.
ಒಂದು ನಿಮಿಷ ಮೌನ ಆಚರಿಸಿದರು.
ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ನಿರ್ದೇಶಕರಾದ ಆರ್.ಪಿ. ಸೋನವಾಲಕರ, ಬಿ.ಎಚ್. ಸೋನವಾಲಕರ, ವೆಂಕಟೇಶ ಸೋನವಾಲಕರ, ಪ್ರದೀಪ ಲಂಕೆಪ್ಪನ್ನವರ, ಸಂದೀಪ ಸೋನವಾಲಕರ, ಪ್ರೊ. ಎ.ಪಿ. ರಡ್ಡಿ, ಪ್ರೊ. ಎಸ್.ಸಿ. ಮಂಟೂರ ಇದ್ದರು.