ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸಂಗಮೇಶ ಎಸ್. ಗುಜಗೊಂಡ ಅವರು ಅಧಿಕಾರವನ್ನು ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹಾಗೂ ಹಿರಿಯ ನಿರ್ದೇಶಕ ಆರ್.ಪಿ. ಸೋನವಾಲಕರ ಅವರು ಪ್ರಾಚಾರ್ಯ ಹುದ್ದೆಯ ಆದೇಶ ಪತ್ರವನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದ ಅವರು ‘ಭೂಗೋಳಶಾಸ್ತ್ರ ವಿಷಯ ಉಪನ್ಯಾಸಕರಾಗಿ 36 ವರ್ಷಗಳ ಅನುಭವವನ್ನು ಹೊಂದಿರುವ ಪ್ರೊ. ಸಂಗಮೇಶ ಗುಜಗೊಂಡ ಅವರು ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸಮರ್ಥರಾಗಿ ಕಾರ್ಯನಿರ್ವಹಿಸುತ್ತಾರೆ ಎನ್ನುವ ವಿಶ್ವಾವಿದೆ’ ಎಂದರು.
ಪ್ರಾಚಾರ್ಯ ಪ್ರೊ. ಸಂಗಮೇಶ ಗುಜಗೊಂಡ ಅವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ನಿವೃತ್ತ ಪ್ರಾಚಾರ್ಯ ಪ್ರೊ. ಎ.ಪಿ. ರಡ್ಡಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ಬಿ.ಎಚ್. ಸೋನವಾಲಕರ, ವೆಂಕಟೇಶ ಸೋನವಾಲಕರ, ಪ್ರದೀಪ ಲಂಕೆಪ್ಪನ್ನವರ, ಸಂದೀಪ ಸೋನವಾಲಕರ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.