Breaking News
Home / Recent Posts / ಮೇ 27 ರಂದು ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್‍ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

ಮೇ 27 ರಂದು ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್‍ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

Spread the love

ಮೇ 27 ರಂದು ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್‍ಸಿ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

ಮೂಡಲಗಿ ನ್ಯಾಯಾಲಯದ ಕಟ್ಟಡವನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಉದ್ಘಾಟನೆಗೆ ಸಜ್ಜಾಗಿ ನಿಂತಿರುವ ಇಲ್ಲಿಯ ದಿವಾಣಿ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ನೂತನ ಕಟ್ಟಡವನ್ನು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬುಧವಾರದಂದು ಪರಿಶೀಲಿಸಿದರು.
ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೂಡಲಗಿಯಲ್ಲಿ ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ಕಟ್ಟಡ ಕಾಮಗಾರಿಯು ಸಂಪೂರ್ಣವಾಗಿ ಮುಗಿದಿದೆ. ಮೂಡಲಗಿ ಎಪಿಎಂಸಿಯಿಂದ 4 ಎಕರೆ ಜಮೀನನ್ನು ನೀಡಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ರೂ. ಅನುದಾನದಲ್ಲಿ ಈ ಕಾಮಗಾರಿ ನಿರ್ಮಾಣವಾಗಿದೆ. ಇದೇ 27 ರಂದು ಹೊಸ ನ್ಯಾಯಾಲಯವನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ನ್ಯಾಯಾಲಯದ ಕಟ್ಟಡದಲ್ಲಿ ದಿವಾಣಿ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಸತಿ ಗೃಹಗಳು ಸೇರಿವೆ. ಮೇ 27 ರಂದು ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯವನ್ನು ಕರ್ನಾಟಕ ಹೈಕೋರ್ಟನ ಮುಖ್ಯ ನ್ಯಾಯಮೂರ್ತಿ ಪ್ರಸನ್ ವರಾಳೆ ಅವರು ಉದ್ಘಾಟನೆ ಮಾಡುವರು. ಮುಖ್ಯ ಅತಿಥಿಗಳಾಗಿ ಹೈಕೋರ್ಟನ ನ್ಯಾಯಮೂರ್ತಿಗಳಾದ ಬಿ.ವೀರಪ್ಪ, ರಾಮಚಂದ್ರ ಡಿ. ಹುದ್ದಾರ ಹಾಗೂ ಸಚೀನ ಮಗದುಮ್ಮ ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮೂಡಲಗಿ ವಕೀಲರ ಸಂಘದ ಅಧ್ಯಕ್ಷ ಸುಧೀರ ಗೋಡಿಗೌಡರ, ಪ್ರಧಾನ ಕಾರ್ಯದರ್ಶಿ ಬಿ.ವಾಯ್. ಹೆಬ್ಬಾಳ ಹಾಗೂ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ