Breaking News
Home / Recent Posts / ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಕ್ತದಾನ-ಸಂಸದ ಈರಣ್ಣ ಕಡಾಡಿ ಚಾಲನೆ

ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಕ್ತದಾನ-ಸಂಸದ ಈರಣ್ಣ ಕಡಾಡಿ ಚಾಲನೆ

Spread the love

ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರಿಂದ ರಕ್ತದಾನ-ಸಂಸದ ಈರಣ್ಣ ಕಡಾಡಿ ಚಾಲನೆ

ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಗೋಕಾಕ ನಗರದ ರೋಟರಿ ಕ್ಲಬ್ ಬ್ಲಡ್ ಬ್ಯಾಂಕ್‍ನಲ್ಲಿ ರಕ್ತದಾನ ಕಾರ್ಯಕ್ರಮಕ್ಕೆ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಚಾಲನೆ ನೀಡಿದರು.


ಶನಿವಾರ ಮೇ 29 ರಂದು ನಗರದ ರೋಟರಿ ಕ್ಲಬ್‍ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಕರ್ನಾಟಕ ರಾಜ್ಯಾದ್ಯಂತ ರಕ್ತದಾನ ಮಾಡುವ ಮೂಲಕ ಕೋವಿಡ್ ಸಂದರ್ಭದಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಪಕ್ಷದ ಕಾರ್ಯಕರ್ತರು ತಮ್ಮ ಹತ್ತಿರದ ಬ್ಲಡ್ ಬ್ಯಾಂಕ್‍ಗಳಿಗೆ ಇನ್ನು 3 ದಿನ ಹೋಗಿ ರಕ್ತದಾನ ಮಾಡಲು ಕರೆ ನೀಡಿದರು.
ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರವು ಮೇ 30 ರಂದು ಏಳು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸಲಿದೆ. ಈ ಸಂದರ್ಭದಲ್ಲಿ “ಸೇವಾ ಹೀ ಸಂಘಟನ್” ಮೂಲಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಸೂಚಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಸೇವಾ ಕಾರ್ಯಗಳ ಮೂಲಕ ತೊಂದರೆಗೆ ಸಿಲುಕಿದವರಿಗೆ ಸ್ಪಂದಿಸಲು ಕೋರಿದ್ದಾರೆ.
ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಬಸವರಾಜ ಹಿರೇಮಠ, ಬಸವರಾಜ ಹುಳ್ಳೇರ ಅರಭಾವಿ ಬಿಜೆಪಿ ಮಂಡಲ ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಸುರೇಶ ಮಠಪತಿ, ಶ್ರೀಕಾಂತ ಕೌಜಲಗಿ, ಅಶೋಕ ಶಿವಾಪೂರ, ಮಲ್ಲಿಕಾರ್ಜುನ ಪಾಟೀಲ, ದುಂಡಪ್ಪ ನಿಂಗನ್ನವರ, ಭೀಮಶಿ ಬಂಗಾರಿ, ಪರಪ್ಪ ಗಿರೆಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ