ಪೋಲಿಸ್ ಸಿಬ್ಬಂದಿಗೆ ಆಹಾರ ವ್ಯವಸ್ಥೆ
ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‍ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳಿಗೆ ಶನಿವಾರ ಮಧ್ಯಾಹ್ನ ಇಲ್ಲಿಯ ಕಲ್ಪವೃಕ್ಷ ಹೊಟೇಲ ಮಾಲಿಕ ವೆಂಕಟೇಶ ಕುದರಿ ಊಟದ ವ್ಯವಸ್ಥೆ ಮಾಡಿಸಿ ಮಾನವೀಯತೆ ಮೆರೆದರು.
ಠಾಣೆಯ ಆವರಣದಲ್ಲಿ ಸಿಬ್ಬಂದಿಗಳಿಗೆ ಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್‍ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಪಿಎಸ್‍ಐ ಎಚ್ ವಾಯ್ ಬಾಲದಂಡಿ, ಪೋಲಿಸ ಸಿಬ್ಬಂದಿ ಹಾಗೂ ಹೊಟೇಲ ಸಿಬ್ಬಂದಿ ವರ್ಗದವರು ಇದ್ದರು.
IN MUDALGI Latest Kannada News