ಮೂಡಲಗಿ : ಆಧುನಿಕ ಜಗತ್ತನ್ನು ಕಾಡುತ್ತಿರುವ ಕೋವಿಡ್-19 ಮಾರಕ ವೈರಸ್ ಎಲ್ಲರನ್ನು ಬೆಚ್ಚಿ ಬೀಳಿಸುತ್ತಿದೆ. ಹಂತಹಂತವಾಗಿ ಜಗತ್ತಿನ ತುಂಬೆಲ್ಲಾ ಹರಡುತ್ತಿರುವ ಈ ವೈರಸ್ ಸಾವಿರಾರುಜನರನ್ನು ಈಗಾಗಲೇ ಬಲಿತೆಗೆದುಕೊಂಡಿದೆ. ಇದನ್ನು ತಡೆಗಟ್ಟುವದು ಸವಾಲಿನ ಕೆಲಸವಾಗಿದೆ.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಯುಗದಲ್ಲಿ ಬದುಕುತ್ತಿರುವ ಈ ದಿನಗಳಲ್ಲಿ ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಎಲ್.ಎಮ್.ಎಸ್ ಕರ್ನಾಟಕ(ಕಲಿಕಾ ನಿರ್ವಹಣಾ ವ್ಯವಸ್ಥೆ) ಯೋಜನೆಯಡಿಯಲ್ಲಿ ಎಲ್ಲಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ಪಿ.ಸಿ. ನೀಡುತ್ತಿರುವದು ಮಕ್ಕಳ ಭವಿಷ್ಯಕ್ಕೆ ಆಶಾಕಿರಣವಾಗಿದೆ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಸ್ಥಳೀಯ ಶ್ರೀ ಶಿವಬೋಧರಂಗ ಮಠದ ಸ್ವಾಮಿಜಿಗಳಾದ ಶ್ರೀ ಶ್ರೀಧರ ಸ್ವಾಮಿಜಿಯವರು ಅಭಿಪ್ರಾಯಪಟ್ಟರು.
ಅವರು ಸ್ಥಳೀಯ ಶ್ರೀ ಶ್ರೀಪಾಧಬೋಧ ಸ್ವಾಮಿಜಿ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ.ಸಿ.ವಿತರಣಾ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡುತ್ತಾ, ಸರಕಾರಗಳು ಹಾಗೂ ಉಪನ್ಯಾಸಕರು ಮಕ್ಕಳ ಭವಿಷ್ಯದತ್ತ ಗಮನ ಹರಿಸಬೇಕಾದ ಅನಿವಾರ್ಯತೆಯಿದೆ. ಕೋವಿಡ್ ಕಾರಣದಿಂದಾಗಿ ಆನಲೈನ್ ತರಗತಿಗಳು ಅನಿವಾರ್ಯವಾಗಿದ್ದು ಈ ನಿಟ್ಟಿನಲ್ಲಿ ಸರಕಾರವು ಟ್ಯಾಬ್ಲೆಟ್ ಪಿ.ಸಿ.ವಿತರಿಸುತ್ತಿದ್ದು, ವಿದ್ಯಾರ್ಥಿಗಳು ಟ್ಯಾಬ್ಲೆಟ್ ಪಿ.ಸಿ.ಯ ಮುಖೇನ ಜ್ಞಾನಾರ್ಜನೆಯನ್ನು ಮುಂದುವರೆಸಬೇಕೆಂದು ತಿಳಿಸಿದರು.
ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಆಶಾಕಿರಣವಾಗಿ ಬೆಳಗುತ್ತಿರುವ ಶ್ರೀಪಾದಭೋಧ ಸ್ವಾಮಿಜಿ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದ ಕಾರ್ಯ ಅವಿಸ್ಮರಣೀಯ.ಮಹಾವಿದ್ಯಾಲಯದ ಆಶೋತ್ತರಗಳಿಗೆ ವಿದ್ಯಾರ್ಥಿಗಳು ಸ್ಪಂದಿಸಬೇಕಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶಾನೂರಕುಮಾರ ಗಾಣಿಗೇರ ಮಾತನಾಡಿ, ಉನ್ನತ ಶಿಕ್ಷಣದ ಆಶಯಗಳನ್ನು ಈಡೇರಿಸಲು ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗದ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ತಲುಪಲೆಂಬ ಉದ್ದೇಶದಿಂದ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ.ಅದರಲ್ಲಿ ಈ ಉಚಿತ ಟ್ಯಾಬ್ಲೆಟ್ ಪಿ.ಸಿ.ಯೋಜನೆಯು ಒಂದಾಗಿದ್ದು ಅದರ ಸದುಪಯೋಗವಾಗಬೇಕು ವಿದ್ಯಾರ್ಥಿಗಳು ಇದಕ್ಕೆ ಸ್ಪಂದಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ಸಿ.ಡಿ.ಸಿ ಸದಸ್ಯರಾದ ಚಂದ್ರುಗಾಣಿಗ, ಸಂಜು ಮೊಕಾಶಿ, ಸಾಂಸ್ಕøತಿಕ ವಿಭಾಗದ ಸಂಯೋಜಕಿ ಶಿವಲೀಲಾ ಎಚ್.ಬಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರವಿ ಗಡದನ್ನವರ ಮುಂತಾದವರು ಪಾಲ್ಗೊಂಡಿದ್ದರು.
ಉಪನ್ಯಾಸಕರಾದ ಸಂಜೀವಕುಮಾರ ಗಾಣಿಗೇರ ಪ್ರಾಸ್ಥಾವಿಕವಾಗಿ ಮಾತನಾಡಿದರು,ರಾಜೇಂದ್ರಪ್ರಸಾದ ಆಸಂಗಿ ಸ್ವಾಗತಿಸಿದರು.ಸಂಜೀವ ಮದರಖಂಡಿ ವಂದಿಸಿದರು. ಬಿ.ಸಿ.ಹೆಬ್ಬಾಳ ನಿರೂಪಿಸಿದರು.
Check Also
ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ
Spread the love ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು …