Breaking News
Home / Recent Posts / ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜನಸಾಮಾನ್ಯರ ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ- ಅರವಿಂದ್ರ ದಳವಾಯಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜನಸಾಮಾನ್ಯರ ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ- ಅರವಿಂದ್ರ ದಳವಾಯಿ

Spread the love

ಮೂಡಲಗಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ ಮುಖಂಡ ಅರವಿಂದ ದಳವಾಯಿಯವರ ನೇತೃತ್ವದಲ್ಲಿ ಸೈಕಲ್ ಜಾಥಾ ಹಾಗೂ ತಳ್ಳು ಗಾಡಿಗಳ ಮೂಲಕ ಕಲ್ಮೇಶ್ವರ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜ ರೋಡ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೆ ತೆರಳಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕಾಂಗ್ರೆಸ ಮುಖಂಡ ಅರವಿಂದ್ರ ದಳವಾಯಿ ಮಾತನಾಡಿ, ಬೆಲೆ ಏರಿಕೆ ಜೊತೆಗೆ ಕೊರೋನಾ ಮಹಾಮಾರಿಯ ವ್ಯಾಪಕ ಪ್ರಸರಣದಿಂದಾಗಿ ಅನೇಕ ಜನರ ವ್ಯಾಪಾರ,ವಹಿವಾಟು, ಉದ್ಯೋಗ ಸ್ಥಗಿತಗೊಂಡು ಉತ್ಪಾದನೆ ಕುಂಟಿತಗೊಂಡು ಕೃಷಿ ಕೂಲಿಕಾರರು, ಕಾರ್ಮಿಕರು, ಸಣ್ಣ ವ್ಯಾಪಾರಸ್ಥರು ಮತ್ತು ಸಣ್ಣ ರೈತರ ಆದಾಯ ಕುಂಟಿತಗೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ತೈಲ,ಮತ್ತು ದಿನಸಿ ಸಾಮಗ್ರಿಗಳ ಬೆಲೆ ದಿನೆ ದಿನೆ ಏರುತ್ತಿರುವುದು ಬಡ ಜನತೆಗೆ ಮರ್ಮಾಘಾತವಾಗಿದೆ.ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಮೇಲೆ ಅಚ್ಚೇದಿನ್ ಬರಲಿವೆ ಎಂದು ಭಾವಿಸಿದ ಜನತೆಗೆ ನಿರಾಸೆ ಮೂಡಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಬದುಕುವುದೆ ದುಸ್ತರವಾಗಿದೆ.ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜನಸಾಮಾನ್ಯರ ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ. ಶೀಘ್ರ ಬೆಲೆ ಇಳಿಕೆ ಮಾಡಿ ಜನ ಸಾಮಾನ್ಯರ ಸಂಕಷ್ಟಕ್ಕೆ ನೆರವಾಗಬೇಕು ಎಂದರು.

ಹಿರಿಯ ಕಾಂಗ್ರೆಸ ಮುಖಂಡ ಎಸ್ ಆರ್ ಸೋನವಾಲ್ಕರ, ರವಿ ತುಪ್ಪದ, ಗಿರೀಶ ಕರಡಿ, ರವಿ ಮೂಡಲಗಿ ಮಾತನಾಡಿ, ಕೇಂದ್ರ ಸರ್ಕಾರ ಜನಸಾಮಾನ್ಯರು ಬಳಸುವಂತಹ ಪೆಟ್ರೋಲ್-ಡೀಸೆಲ್, ಗ್ಯಾಸ್, ದಿನ ಬಳಕೆ ವಸ್ತುಗಳ ಬೆಲೆ ದಿನದಿನಕ್ಕೆ ಗಗನಕ್ಕೆ ಏರಿಸಿ ಬಡ ಜನರ ಹೊಟ್ಟೆ ಮೇಲೆ ಹೊಡೆಯುವಂತಹ ಕೆಲಸ ಮಾಡುತ್ತಿದೆ. ಮೋದಿಯವರು ಕೇವಲ ಭಾಷಣದಲ್ಲಿ ಬುರಡೆ ಬಿಡುತ್ತ ಬಡವರ ಹಾಗೂ ಕಾರ್ಮಿಕರ ಬಾಯಿಗೆ ಮಣ್ಣುಹಾಕುವ ಕೆಲಸ ಮಾಡುತ್ತಿದ್ದಾರೆ. ಬೆಲೆ ಏರಿಕೆಯಿಂದ ಬಡ ಜನರು ಸರ್ಕಾರದ ವಿರುದ್ದ ಹಿಡಿಶಾಪ ಹಾಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ಅರಭಾಂವಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಲೀಂ ಇನಾಮದಾರ, ಯುವ ಘಟಕದ ಅಧ್ಯಕ್ಷ ಇರ್ಶಾದ ಪೈಲ್ವಾನ್, ಮಲೀಕ ಕಳ್ಳಿಮನಿ, ಮದಾರಸಾಬ ಜಕಾತಿ, ಮೈನುದ್ದಿನ್ ಬಳಿಗಾರ, ಚೆನ್ನಯ್ಯ ಹಿರೇಮಠ, ದಶರತ್ ಸಂಗಾನಟ್ಟಿ, ರಮಜಾನ ಬಿಜಾಪೂರ, ಚುಟುಕುಸಾಬ ಜಾತಕಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ