ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ
ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತಿಚಿಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿಯಾಗಿ ದೆಹಲಿ ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭವಾಗಬೇಕು ಎಂಬುವುದರ ಬಗ್ಗೆ ಮನವಿ ಮಾಡಲಾಗಿತ್ತು. ನನ್ನ ಮನವಿಯನ್ನು ಪರಿಗಣಿಸಿ, ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭಿಸಿದ್ದು ಸ್ವಾಗತಾರ್ಹ ಕ್ರಮ ಎಂದು ಹರ್ಷ ವ್ಯಕ್ತಪಡಿಸಿದದ ಅವರು ಪ್ರಧಾನಿ ನರೇಂದ್ರ ಮೋದಿ,ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಅಭಿನಂದಿಸುತ್ತೇನೆ ಎಂದರು.