ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ಇಂದು ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ಧಾರ ಆದೇಶಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕಲುಬುರಗಿ, ವಿಜಯಪುರದಲ್ಲಿ ಶನಿವಾರ, ಭಾನುವಾರ ಲಾಕ್‍ಡೌನ್ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.
ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.
ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.
ಶಾಲಾ-ಕಾಲೇಜು…
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವಂತ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.