Breaking News
Home / Recent Posts / ಪಂಚಮಸಾಲಿ ಹೋರಾಟದಲ್ಲಿ ಪಾಲ್ಗೊಂಡ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿರುವದು ಖಂಡನಾರ್ಹವಾಗಿದೆ – ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ

ಪಂಚಮಸಾಲಿ ಹೋರಾಟದಲ್ಲಿ ಪಾಲ್ಗೊಂಡ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿರುವದು ಖಂಡನಾರ್ಹವಾಗಿದೆ – ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ

Spread the love

ಮೂಡಲಗಿ: ಮಾಜಿ ಸಿಎಂ ಯಡಿಯೂರಪ್ಪನವರ ಕುತಂತ್ರದಿಂದ ಪಂಚಮಸಾಲಿ ಹೋರಾಟದಲ್ಲಿ ಭಾಗವಹಿಸಿದ ಶಾಸಕರಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈ ತಪ್ಪುವಂತಾಗಿದೆ. ಮಿಸಲಾತಿ ಸಲುವಾಗಿ ರಾಜ್ಯಾದ್ಯಂತ ಕಾಲ್ನಡಿಗೆ ಮೂಲಕ ಹೋರಾಟ ಕೈಗೊಳ್ಳಲಾಗಿತ್ತು ದುರ್ದೈವವಶಾತ ಹೋರಾಟದಲ್ಲಿ ಪಾಲ್ಗೊಂಡ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿರುವದು ಖಂಡನಾರ್ಹವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಆಕ್ರೋಶ ವ್ಯಕ್ತಪಸಿದ್ದಾರೆ.
ಪಂಚಮಸಾಲಿ ಹೋರಾಟ ಸಂದರ್ಭದಲ್ಲಿ ಭಾಗವಹಿಸಿದ ಶಾಸಕರಿಗೆ ಯಾವುದೇ ಮಂತ್ರಿ ಸ್ಥಾನ ನೀಡದೆ, ನಮ್ಮ ಪ್ರತಿಯೊಂದು ಹೋರಾಟದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಯಡಿಯೂರಪ್ಪನವರು ಕುತಂತ್ರ ಮಾಡಿದ್ದಾರೆ ಎಂದು ಶುಕ್ರವಾರದಂದು ಪಟ್ಟಣದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಾರ್ಯಾಲದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಬಡ ಮಕ್ಕಳ ಭವಷ್ಯಕ್ಕಾಗಿ 2ಎ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಅಧಿಕಾರ ವ್ಯಾಮೋಹವನ್ನು ತೊರೆದು ಹೋರಾಡಿದ್ದ ಬಸನಗೌಡ ಪಾಟೀಲ ಯತ್ನಾಳ, ಸಿದ್ದು ಸವದಿ, ಅರವಿಂದ ಬೆಲ್ಲದ ಮತ್ತು ಆನಂದ ಮಾಮನಿಯವರಿಗೆ ಸಿಗಬೇಕಾದ ಸಚಿವ ಸ್ಥಾನವನ್ನು ಮಾಜಿ ಸಿಎಂ ಯಡಿಯೂರಪ್ಪನವರÀ ಕುತಂತ್ರದಿಂದ ತಪ್ಪಿಸಲಾಗಿದೆ. ನಮ್ಮ ಸಮಾಜದ ನಾಯಕರನ್ನು ತುಳಿಯುವಂತಹÀ ಕಾರ್ಯ ಯಡಿಯೂರಪ್ಪನವರು ಮಾಡುತ್ತಿದ್ದಾರೆ ಎಂದರು.
ನಮ್ಮ ಸಮಾಜದ ಹೋರಾಟ ಸಂದರ್ಭದಲ್ಲಿ ಆರು ತಿಂಗಳೊಳಗಾಗಿ 2ಎ ಮೀಸಲಾತಿ ನೀಡಲು ಭರವಸೆಯನ್ನು ನೀಡಿದ್ದರು. ರಾಜಕೀಯ ಒಳ ಜಗಳದಿಂದ ಸಿಎಂ ಸ್ಥಾನದಿಂದ ಕೆಳಗೆ ಇಳಿಯಬೇಕಾಯಿತು. ಆದರೆ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಯಡಿಯೂರಪ್ಪನವರು ನೀಡಿರುವ ಭರವಸೆಯಂತೆ 2ಎ ಮೀಸಲಾತಿಯನ್ನು ನೀಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ. ಶೈಕ್ಷಣಿಕವಾಗಿ ಸಾಮಾಜಿಕವಾಗಿ ಆರ್ಥಿಕವಾಗಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿಯ ಅವಶ್ಯಕತೆ ಇರುತ್ತದೆ. ರಾಜಕೀಯವಾಗಿ ಪ್ರಾಬಲ್ಯ ಹೊಂದಲು ಅನುಕೂಲವಾಗುವದು ಅಷ್ಟೇ ಅಲ್ಲದೆ ಮುಂದಿನ ಪೀಳಿಗೆಗೆ ಉಪಯುಕ್ತವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರವಿ ಮಹಾಲಿಂಗಪೂರ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿಯವರು ಆದಷ್ಟು ಬೇಗ ನಮ್ಮ ಬೇಡಿಕೆಯಾದ 2ಎ ಮಿಸಲಾತಿಯನ್ನು ನೀಡದೆ ಇದ್ದ ಪಕ್ಷದಲ್ಲಿ ಕೂಡಲಸಂಗಮ ಸ್ವಾಮೀಜಿಯವರ ನೇತೃತ್ವದಲ್ಲಿ ಉಗ್ರ ಹೋರಾಟ ಮಾಡಲಾಗುವುದು, ಆದಷ್ಟೂ ಬೇಗ ಪಂಚಮಸಾಲಿ ಸಮಾಜಕ್ಕಾಗಿ ಹೋರಾಟ ನಡೆಸಿದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಬಿ.ಜಿ. ನಿಡಗುಂದಿ, ವ್ಹಿ.ಎಸ್. ಮುಗಳಖೋಡ, ಮಹಾದೇವ ಗೋಕಾಕ, ರುದ್ರಪ್ಪ ಬಳಿಗಾರ, ಗುರಲಿಂಗಪ್ಪ ಗೋಕಾಕ, ಅಜ್ಜಪ್ಪ ಬಳಿಗಾರ, ಬಸವರಾಜ ಕುರುಬಗಟ್ಟಿ ಮತ್ತು ಪರಿಶುರಾಮ ಗೋಕಾಕ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ