ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಡಾ. ಸುರೇಶ ಹನಗಂಡಿ.ಆಯ್ಕೆ
ಮೂಡಲಗಿ: ಸಮೀಪದ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸುರೇಶ ಭೀ. ಹನಗಂಡಿ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಡಾ. ಸುರೇಶ ಅವರು ಸಾಹಿತ್ಯ, ಸಮಾಜ, ಶೈಕ್ಷಣಿಕ, ಗ್ರಂಥ ಸಂಪಾದನೆ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಬಸಗೌಡ ಪಾಟೀಲ, ಸಂಸ್ಥೆಯ ಉಪಾಧ್ಯಕ್ಷರು, ನಿರ್ದೇಶಕರು, ಪ್ರಾಚಾರ್ಯರು ಹಾಗೂ ಬೋಧಕ ಬೋಧಕೇತರ ಸಿಬ್ಬಂಧಿ ಅಭಿನಂದಿಸಿದ್ದಾರೆ.
IN MUDALGI Latest Kannada News