ಕಬ್ಬಿಗೆ ಎಫ್‌ಆರ್‌ಪಿ ಬೆಲೆ ನಿಗದಿ- ಸಂಸದ ಈರಣ್ಣ ಕಡಾಡಿ ಸ್ವಾಗತ
ಮೂಡಲಗಿ: ಕೇಂದ್ರ ಸಚಿವ ಸಂಪುಟವು 2021-22ನೇ ಸಾಲಿನ ಕಬ್ಬಿನ ಎಫ್.ಆರ್.ಪಿ. ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 290 ರೂ.ಗೆ ಹೆಚ್ಚಿಸಿದೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಸ್ವಾಗತಾರ್ಹ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಬುಧವಾರ ಆ 25 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಕಬ್ಬಿನ ಎಫ್.ಆರ್.ಪಿ. ಬೆಲೆ ಹೆಚ್ಚಳದಿಂದ 5 ಕೋಟಿ ಕಬ್ಬು ಬೆಳೆಯುವ ರೈತರಿಗೆ ಮತ್ತು ಅವರ ಅವಲಂಬಿತರಿಗೆ ಹಾಗೂ ಸಕ್ಕರೆ ಕಾರ್ಖಾನೆಗಳಲ್ಲಿ ಕೆಲಸ ಮಾಡುವ 5 ಲಕ್ಷ ಕಾರ್ಮಿಕರಿಗೆ ಮತ್ತು ಅವಲಂಬಿತರಿಗೆ ಸಹಾಯವಾಗಲಿದೆ ಎಂದರು.
2013-14ನೇ ಸಾಲಿನಲ್ಲಿ ಎಫ್.ಆರ್.ಪಿ. ಪ್ರತಿ ಕ್ವಿಂಟಲ್‌ಗೆ ರೂ.210 ಇದ್ದು, 2021-22ನೇ ಸಾಲಿಗೆ ಎಫ್.ಆರ್.ಪಿ. ಪ್ರತಿ ಕ್ವಿಂಟಲ್‌ಗೆ 290 ರೂ ಹೆಚ್ಚಿಸಲಾಗಿದೆ. ಇದರಿಂದ ಕಬ್ಬಿನ ರಫ್ತನ್ನು ಮತ್ತಷ್ಟು ಹೆಚ್ಚಿಸುತ್ತದೆ, ಹೆಚ್ಚಿನ ಎಥೆನಾಲ್ ಉತ್ಪಾದನೆಗೆ ಅನುಕೂಲ ಮಾಡಿಕೊಡುತ್ತದೆ, ಉದ್ಯೋಗ ಸೃಷ್ಟಿಸುತ್ತದೆ, ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಇದು ಕೇಂದ್ರ ಸರ್ಕಾರ ರೈತ ಪರವಾಗಿದೆ.
ಈ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಪಿಯೂಷ್ ಗೋಯಲ್ ಅವರನ್ನು ಅಭಿನಂದಿಸಬೇಕಾಗುತ್ತದೆ. ಎಂದರು.