ಮೂಡಲಗಿ: ಕಾರ್ಮಿಕ ಇಲಾಖೆವತಿಯಿಂದ ಮಂಗಳವಾರ ಪುರಸಭೆ ವ್ಯಾಪ್ತಿಯ ಟೇಲರಿಂಗ ವೃತ್ತಿಯ ಅಸಂಘಟಿತ 110 ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.
ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿ ಮಾತನಾಡಿ, ಶಾಸಕರ ಮಾರ್ಗದರ್ಶನದಲ್ಲಿ ಕೊರೋನಾ ಸಂಕಷ್ಟದಲ್ಲಿದ್ದ ಅಸಂಘಟಿತ ಕಾರ್ಮಿಕರಿಗೆ ಕಿಟ್ ವಿತರಿಸಿದ್ದು ಆಸರೆಯಾಗಿದೆ ಇದರ ಸದುಪಯೋಗ ಪಡೆಯಬೇಕೆಂದರು.
ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯ ಗಫಾರ ಡಾಂಗೆ, ಟೇಲರಿಂಗ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಕೌಜಲಗಿ ಹಾಗೂ ಟೇಲರಿಂಗ್ ಕಾರ್ಮಿಕರು ಇದ್ದರು.