Breaking News
Home / Recent Posts / ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶ

ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶ

Spread the love

ಮೂಡಲಗಿ: ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶದಿಂದ ಸರ್ಕಾರವು ರಾಜ್ಯದಾದ್ಯಂತ ಲಸಿಕಾ ಮೇಳ ಆಯೋಜಿಸಿದೆ. ಮೂಡಲಗಿ ತಾಲೂಕಿನ ಎಲ್ಲ ನಾಗರಿಕರು ಲಸಿಕಾ ಮೇಳ ಕಾರ್ಯಕ್ರಮದ ಪ್ರಯೋಜನೆ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ ಡಿ.ಜಿ.ಮಹಾತ್ ಹೇಳಿದರು.

ಪಟ್ಟಣದ ಗಾಂಧಿ ಚೌಕ್ ಬಳಿ ಇರುವ ಹನುಮಾನ ದೇವಸ್ಥಾನದಲ್ಲಿ ಆಯೋಜಿಸಲಾದ ಲಸಿಕಾ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಭಾಂವಿ ಮತ ಕ್ಷೇತ್ರ ವ್ಯಾಪ್ತಿ ಸುಮಾರು 25 ಸಾವಿರ ಲಸಿಕೆಗಳನ್ನು ನೀಡವ ಗುರಿ ಹೊಂದಲಾಗಿದ್ದು, ಆ ಪ್ರಕಾರ ಪ್ರತಿಯೊಂದು ಗ್ರಾಮಗಳಲ್ಲಿ ಲಸಿಕಾ ಕೇಂದ್ರಗಳನ್ನು ತರೆಯಲಾಗಿದೆ. ಅರಭಾಂವಿ ಮತ ಕ್ಷೇತ್ರ ವ್ಯಾಪ್ತಿಯಲ್ಲಿ 123 ಕೇಂದ್ರಗಳನ್ನು ತೆರೆದು, ಸುಮಾರು 1300 ಸಿಬ್ಬಂದಿಗಳನ್ನು ನೇಮಿಸಿ ಲಸಿಕಾ ಮೇಳವನ್ನು ಆರಂಭಿಸಲಾಗಿದೆ ಎಂದರು.

ಲಸಿಕಾ ಮೇಳದಲ್ಲಿ ಹೆಚ್ಚು ಜನರಿಗೆ ಲಸಿಕೆ ಪಡೆಯಲು ಅನುವಾಗುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಇತರೆ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು, ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳು ಸಕ್ರಿಯವಾಗಿ ತೊಡಗಿಕೊಂಡು ಲಸಿಕಾ ಮೇಳವನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ ಎಂದರು.

ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ನಿಮಿತ್ಯವಾಗಿ ಅರಭಾಂವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಲಸಿಕೆ ಮೇಳದಲ್ಲಿ ಲಸಿಕೆ ಪಡೆದುಕೊಳ್ಳುವ ಪ್ರತಿಯೊಬ್ಬ ನಾಗರಿಕರಿಗೆ ಸಿಹಿ ನೀಡಿ, ನಾಗರಿಕರು ಲಸಿಕೆ ಹಾಕಿಸಿಕೊಳ್ಳುವಂತೆ ಮತ್ತಷ್ಟು ಉತ್ಸಾಹ ನೀಡುವಂತೆ ಮಾಡಿರುವ ಅವರು ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಈ ವಿಶೇಷ ಕೋವಿಡ್ ಲಸಿಕಾ ಮೇಳದಲ್ಲಿ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು. ಕೋವಿಡ್ ವಿರುದ್ದದ ಹೋರಾಟದಲ್ಲಿ ಪ್ರಮುಖ ಅಸ್ತçವಾಗಿದ್ದು, ಮೂರನೇ ಅಲೆ ಅಪ್ಪಳಿಸುವ ಮುನ್ನ ಅರಭಾಂವಿ ಮತ ಕ್ಷೇತ್ರದ ಎಲ್ಲ ನಾಗರಿಕರು ಲಸಿಕೆ ಪಡೆದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಾಯ್.ಎಮ್.ಗುಜನಟ್ಟಿ, ಪುರಸಭೆ ಮುಖ್ಯಾಧಿಕಾರಿ ದೀಪಕ್ ಹರ್ದಿ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಭಾರತಿ ಕೋಣಿ, ಪುರಸಭೆಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳೋಖಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಹಾಗೂ ಪುರಸಭೆ ಸದಸ್ಯರು, ಪಟ್ಟಣದ ಮುಖಂಡರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ