Breaking News
Home / Recent Posts / ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರ

ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರ

Spread the love

ಮೂಡಲಗಿ: ಸುಮಾರು 43 ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಕರೆ ಕೊಟ್ಟ ಮುಷ್ಕರ ಹಿನ್ನೆಲೆಯಲ್ಲಿ ನಮ್ಮನ್ನು ಕೇಂದ್ರ ಸ್ಥಾನದಿಂದ ಬಿಡಲು ನಮಗೆ ಅನುಮತಿ ನೀಡಬೇಕೆಂದು ಇಲ್ಲಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ಡಿ.ಜಿ.ಮಹಾತ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ರಾಜ್ಯದ 10450 ಎಲ್ಲ ಗ್ರಾಮ ಸಹಾಯಕರು ಕಡ್ಡಾಯವಾಗಿ ಈ ಮುಷ್ಕರದಲ್ಲಿ ಭಾಗವಹಿಸಲು ರಾಜ್ಯ ಸಂಘದ ನಿರ್ದೇಶನ ಹಾಗೂ ಆದೇಶವಿರುವುದರಿಂದ ನಾವೂ ಕೂಡ ಈ ಮುಷ್ಕರದಲ್ಲಿ ಭಾಗವಹಿಸಬೇಕಾಗಿರುವುದರಿಂದ ನಾವು ಕಾರ್ಯ ನಿರ್ವಹಿಸುವ ಕೇಂದ್ರ ಸ್ಥಾನ ಬಿಡಲು ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಭೀಮಶಿ ಸೊರಗಾಂವಿ, ಉಪಾಧ್ಯಕ್ಷ ಬೀರಪ್ಪ ಮೆನಸಪ್ಪಗೋಳ, ಅರ್ಬಣ್ಣ ತಳವಾರ, ಮಾರುತಿ ಮಂಡರ, ಹಸನ ಡೊಂಗ್ರೆ, ಅಡಿವೆಪ್ಪ ಹಡಿಗಿನಾಳ, ವಿಠ್ಠಲ ತಳವಾರ, ಲಾಲಸಾಬ ಸಯ್ಯದ, ಉಮೇಶ ಕಂದಿ, ಮಲ್ಲೇಶ ತಳವಾರ, ಗೋವಿಂದ ಗೋಪಾಳಿ ಇದ್ದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ