ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ
ಸೆ. 22ರಂದು, ಬುಧವಾರ ರಕ್ತದಾನ ಶಿಬಿರ

ಮೂಡಲಗಿ: ಚಿಕ್ಕೋಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ಬಿಮ್ಸ್ ರಕ್ತ ಭಂಡಾರ, ಪುರಸಭೆ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ವಿವಿಧ ಕಾಲೇಜುಗಳ ಸಹಯೋಗದಲ್ಲಿ ಸೆ. 22ರಂದು ಬೆಳಿಗ್ಗೆ 9.30ಕ್ಕೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿರುವರು.
ಮೂಡಲಗಿ ಸೇರಿದಂತೆ ತಾಲ್ಲೂಕು ವ್ಯಾಪ್ತಿಯಲ್ಲಿಯ ಆಸಕ್ತರು ರಕ್ತದಾನವನ್ನು ಮಾಡಲು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಅಧ್ಯಕ್ಷ ಬಾಲಶೇಖರ ಬಂದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
IN MUDALGI Latest Kannada News