Breaking News
Home / Recent Posts / ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ

ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ

Spread the love

ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಸಾಧ್ಯ: ಅಶೋಕ ಮಲಬಣ್ಣವರ

ಮೂಡಲಗಿ: ವಿದ್ಯಾರ್ಥಿಗಳು ಆಹಾರದಲ್ಲಿ ಹಸಿರು ತರಕಾರಿಗಳನ್ನು ಹಾಗೂ ದ್ವಿದಳ ಧಾನ್ಯಗಳನ್ನು ಬಳಸುವದರೊಂದಿಗೆ ಉತ್ತಮ ಆರೋಗ್ಯವನ್ನು ಪಡೆಯಬೇಕೆಂದು ಗೋಕಾಕ ತಾಲೂಕಾ ಅಕ್ಷರ ದಾಸೋಹದ ನಿರ್ದೆಶಕ ಅಶೋಕ ಮಲಬಣ್ಣವರ ಹೇಳಿದರು
ಅವರು ಬುಧವಾರದಂದು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಪ್ರೋಟೀನ್‍ಯುಕ್ತ ಹಾಗೂ ಪೋಷಕಾಂಶಗಳನ್ನು ಹೊಂದಿರುವ ಆಹಾರದ ಜೊತೆಗೆ ಶಾಲೆಯಲ್ಲಿ ಕೊಡುವ ಕೆನೆಭರಿತ ಹಾಲು ಹಾಗೂ ಪ್ರೋಟೀನ್‍ಯುಕ್ತ ಮಾತ್ರೆಗಳನ್ನು ಎಲ್ಲಾ ವಿದ್ಯಾರ್ಥಿಗಳು ಸೇವಿಸ ಬೇಕೆಂದ ಅವರು ತುಕ್ಕಾನಟ್ಟಿಯ ಸÀರಕಾರಿ ಶಾಲೆ ಅಕ್ಷರ ದಾಸೋಹದಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವದು ಅಭಿಮಾನದ ವಿಷಯ ಎಂದರು.
ಮುಖ್ಯ ಅತಿಥಿ ಡಾ.ಪ್ರಮಿಳಾ ಉಪ್ಪಾರ ಮಾತನಾಡಿ, ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರ ತುಂಬಾ ಮಹತ್ವದ ಪಾತ್ರವಹಿಸುತ್ತದೆ ಹಾಗೂ ವಿದ್ಯಾರ್ಥಿಗಳು ಸಿರಿದಾನ್ಯಗಳನ್ನು ಬಳಸುವದು ಹಾಗೂ ನಮ್ಮ ಹಿರಿಯರು ಬಳಸುತ್ತಿದ್ದ ಆಹಾರ ಪದ್ದತಿಯನ್ನು ಬಳಸುವದು ಬಹಳ ಉಪಯುಕ್ತವಾದದ್ದು, ಉತ್ತಮ ಪ್ರೋಟೀನ್‍ಯುಕ್ತ ಹಸಿರು ಕಾಯಿಪಲ್ಯೆಗಳನ್ನು, ಬೇಳೆಕಾಳುಗಳನ್ನು, ಮೊಳಕೆ ಕಾಳುಗಳನ್ನು ಊಟದಲಿ ್ಲಉಪಯೋಗಿಸುವದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು, ದಿನನಿತ್ಯ ವಿದ್ಯಾರ್ಥಿಗಳು ದ್ಯಾನ, ಯೋಗ ಪ್ರಾಣಾಯಾಮಗಳನ್ನು ರೂಢಿಸಿಕೊಂಡು ದಿನನಿತ್ಯ ಹೆಚ್ಚು ಹೆಚ್ಚು ನೀರನ್ನು ಕುಡಿಯ ಬೇಕು ಎಂದರು.
ಕಲ್ಲೋಳಿ ಸಿ.ಆರ್.ಪಿ. ಜಿ.ಕೆ.ಉಪ್ಪಾರ ಮಾತನಾಡಿ ವಿದ್ಯಾರ್ಥಿಗಳು ಜಂಕ್‍ಪುಡ್‍ನಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳದೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಶಾಲೆ ಪ್ರಧಾನ ಗುರುಗಳಾದ ಎ.ವ್ಹಿ. ಗಿರೆಣ್ಣವರ ಮಾತನಾಡಿ, ಉತ್ತಮ ಆಹಾರ ಪದ್ದತಿ ಬೆಳೆಸಿಕೊಂಡು ಸದೃಡ ದೇಹದೊಂದಿಗೆ ಸದೃಡವಾದ ಮನಸ್ಸನ್ನು ಹೊಂದಬೇಕು. ಮುಂದಿನ ದಿನಗಳಲ್ಲಿ ಅಕ್ಷರದಾಸೋಹದಲ್ಲಿ ಹೆಚ್ಚು ಹೆಚ್ಚು ಸಿರಿಧಾನ್ಯಗಳನ್ನು ಬಳಸೋಣ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ತುಕ್ಕಾನಟ್ಟಿ ಗ್ರಾ.ಪಂ ಅದ್ಯಕ್ಷ ಕುಮಾರ ಮರ್ದಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಕುರಿತಾದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಸ್ಪರ್ದೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಶಿಕ್ಷಕರಾದ ಮಹಾದೇವಗೋಮಾಡಿ, ಲಕ್ಷ್ಮೀ ಹೆಬ್ಬಾಳ, ಪುಷ್ಪಾ ಭರಮದೆ, ಕುಸುಮಾ ಚಿಗರಿ, ವಿಮಲಾಕ್ಷಿ ತೋರಗಲ್, ಶಂಕರ ಲಮಾಣಿ, ಶೀಲಾ ಕುಲಕರ್ಣಿ, ಕೆ.ಆರ.ಭಜಂತ್ರಿ, ಸಂಗೀತಾ ತಳವಾರ, ಎಮ್.ಕೆ.ಕಮ್ಮಾರ, ಅಕ್ಷರದಾಸೋಹ ಸಿಬ್ಬಂದಿ ಪಾಲ್ಗೊಂಡಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ