ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 404 ಅಂಗನವಾಡಿ ಕೇಂದ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾದಡ್ಡಿಯಲ್ಲಿ ಕಾನೂನು ಅರಿವು ನೆರವು ಶಿಬಿರ ಜರುಗಿತು.
ಶಿಬಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕೆ.ಸಿ.ಕನಶೆಟ್ಟಿ ಮಾತನಾಡಿ, ಸರಕಾರ ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಯೋಜನೆಗಳನ್ನು ಜಾರಿಗೆತಂದಿದೆ, ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರನ್ನು ತಮ್ಮ ಅಂಗನವಾಡಿ ವ್ಯಾಪ್ತಿಯಲ್ಲಿ ಪಾಲಕರಿಗೆ ತಿಳಿವಳಿಕೆ ನೀಡಬೇಕು ಮತ್ತು ಬಾಲ್ಯ ವಿವಾಹ ತಡೆಗಟ್ಟಲು ಸಮುದಾಯದವರು ಪಾತ್ರ ಬಹಳ ಮುಖ್ಯವಾಗಿದೆ ಎಂದ ಅವರು ಬಾಲ್ಯ ವಿವಾಹದ ದುಷ್ಪರಿಣಾಮವನ್ನು ಮತ್ತು ಕಾನೂನುಗಳನ್ನು ವಿವರಿಸಿದರು.
ಸಮಾರಂಭದದಲ್ಲಿ ಪಟ್ಟದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಪಾಲಕರು, ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತಿತರು ಭಾಗವಹಿಸಿದರು.
ಅಂಗನವಾಡಿ ಕಾರ್ಯಕರ್ತೆ ಮಾಲತಿ ಸಪ್ತಸಾಗರ ನಿರೂಪಿಸಿ ವಂದಿಸಿದರು.