ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ರೂ 3.30 ಕೋಟಿ ಅನುದಾನ : ಸಂಸದ ಈರಣ್ಣ ಕಡಾಡಿ
ಮೂಡಲಗಿ: ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರ ಗ್ರಾಮೀಣ ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸೂಕ್ತವಾದ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರಾಜ್ಯಕ್ಕೆ 2020-21ನೇ ಸಾಲಿನಲ್ಲಿ 330 ಕೋಟಿ ರೂ. ಮಂಜೂರು ಮಾಡಲಾಗಿದ್ದು, 319.71 ಕೋಟಿ ರೂ. ಅನುದಾನದ ಬಳಕೆÉ ಆಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ರಾಜ್ಯ ಸಚಿವ ರಾಮೇಶ್ವರ ತೇಲಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು.
ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಅಸಂಘಟಿತ ಕಾರ್ಮಿಕರ ಕಲ್ಯಾಣ ಯೋಜನೆಯ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾಸಿಕ ಪಿಂಚಣಿ ರೂಪದಲ್ಲಿ ವೃದ್ಯಾಪ್ಯ ರಕ್ಷಣೆಯನ್ನು ಒದಗಿಸುವ ಸಲುವಾಗಿ ಭಾರತ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ ಕನಿಷ್ಠ ಖಚಿತವಾದ ಮಾಸಿಕ ಪಿಂಚಣಿಯನ್ನು ಅಸಂಘಟಿತ ಕಾರ್ಮಿಕರಿಗೆ 60 ವರ್ಷ ತುಂಬಿದ ನಂತರ ರೂ. 3000/- ಗಳನ್ನು ನೀಡಲಾಗುತ್ತದೆ ಮತ್ತು ಇದುವರೆಗೆ ಸುಮಾರು 46 ಲಕ್ಷ ಅಸಂಘಟಿತ ಕಾರ್ಮಿಕರು ನೊಂದಾಯಿಸಿಕೊಂಡಿದ್ದಾರೆ ಎಂದರು.
ಪ್ರಧಾನ ಮಂತ್ರಿ ಜೀವನ್ ಬಿಮಾ ಯೋಜನೆ ಮೂಲಕ ಜೀವನ ಮತ್ತು ಅಂಗವೈಕಲ್ಯ ರಕ್ಷಣೆಯನ್ನು ಒದಗಿಸಲಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ಶಾಶ್ವತ ಅಂಗವೈಕಲ್ಯದಿಂದ ಮರಣ ಹೊಂದಿದಲ್ಲಿ 2 ಲಕ್ಷ ರೂ, ಅಪಘಾತದಿಂದ ಮೃತಪಟ್ಟರೆ 2.00 ಲಕ್ಷ ರೂ. ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ಆಯುμÁ್ಮನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಮೂಲಕ ಪಡಿತರ ವಿತರಣಾ ವ್ಯವಸ್ಥೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ರೋಜಗಾರ ಯೋಜನೆ, ಮಹಾತ್ಮ ಗಾಂಧಿ ಬಂಕರ್ ಬಿಮಾ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪಿಎಂ ಸ್ವನಿಧಿ, ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಇತ್ಯಾದಿಗಳು ಗ್ರಾಮೀಣ ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಅವರ ಅರ್ಹತೆಯ ಮಾನದಂಡಗಳ ಆಧಾರದ ಮೇಲೆ ಲಭ್ಯವಿದೆ ಎಂದರು.
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 26.08.2021 ರಂದು ಇ-ಶ್ರಮ್ ಪೆÇೀರ್ಟಲ್ ಅನ್ನು ಪ್ರಾರಂಭಿಸಿದೆ, ಇದು ರಾಷ್ಟ್ರೀಯ ಡೇಟಾಬೇಸ್ ಆಗಿದೆ. ಇದರಲ್ಲಿ ಹೆಸರು, ಉದ್ಯೋಗ ವಿಳಾಸ, ಅಸಂಘಟಿತ ಕಾರ್ಮಿಕರ ಶೈಕ್ಷಣಿಕ ಅರ್ಹತೆ, ಕೌಶಲ್ಯ ಪ್ರಕಾರಗಳು, ಕುಟುಂಬದ ವಿವರಗಳು ಇತ್ಯಾದಿಗಳನ್ನು ಒಳಗೊಂಡಿರುತ್ತದೆ. ಅವರಿಗೆ ಸಾಮಾಜಿಕ ಭದ್ರತಾ ಯೋಜನೆಗಳು ಸೂಕ್ತವಾಗಿವೆ. ನವೆಂಬರ್ 28, 2021 ರಂತೆ, 9.69 ಕೋಟಿ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೆÇೀರ್ಟಲ್‍ನಲ್ಲಿ ನೋಂದಾಯಿಸಿದ್ದಾರೆ ಎಂದು ತಿಳಿಸಿದರು.