Breaking News
Home / Recent Posts / ಸ್ಮಾಟ್ ಸಿಟಿ ಮಿಷನ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನ ಬಿಡುಗಡೆ

ಸ್ಮಾಟ್ ಸಿಟಿ ಮಿಷನ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನ ಬಿಡುಗಡೆ

Spread the love

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294 ಕೋಟಿ ರೂ. ಅನುದಾನ ಬಳಕೆ ಆಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು.
ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಕರ್ನಾಟಕದಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಬೆಳಗಾವಿ, ಬೆಂಗಳೂರು, ದಾವಣಗೆರೆ, ಹುಬ್ಬಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರು ಸೇರಿದಂತೆ 7 ನಗರಗಳಲ್ಲಿ ಸ್ಮಾಟ್ ಸಿಟಿ ಮಿಷನ ಯೋಜನೆಯನ್ನು ಕೈಗೊಳ್ಳಲಾಗಿದ್ದು, ಇದುವರೆಗೆ ರಾಜ್ಯಕ್ಕೆ ಒಟ್ಟು 2213 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ 1682.48 ಕೋಟಿ ರೂ ಅನುದಾನದ ಬಳಕೆ ಆಗಿದೆ ಎಂದರು.
ಕೇಂದ್ರ ಸರ್ಕಾರ ಅಮೃತ ಯೋಜನೆಯಡಿ ರಾಜ್ಯಕ್ಕೆ 1660.98 ಕೋಟಿ ರೂ ಬಿಡುಗಡೆ ಮಾಡಿದ್ದು, ಇದರಲ್ಲಿ 1540.79 ಕೋಟಿ ರೂ ಅನುದಾನದ ಬಳಕೆ ಆಗಿದೆ. ಬೆಳಗಾವಿ ಜಿಲ್ಲೆಗೆ 184.28 ಕೋಟಿ ರೂ ಯೋಜನಾ ವೆಚ್ಚವನ್ನು ಅಂದಾಜಿಸಲಾಗಿದೆ ಎಂದ ಸಚಿವರು ಸ್ವಚ್ಚ ಭಾರತ ಮಿಷನ್ (ನಗರ) ಯೋಜನೆಯಡಿ ರಾಜ್ಯಕ್ಕೆ 820.96 ಕೋಟಿ ರೂ ಅಂದಾಜಿಸಲಾಗಿದ್ದು, ಮೊದಲ ಹಂತದ ಅನುದಾನದಲ್ಲಿ 199.01 ಕೋಟಿ ರೂ ಬಿಡುಗಡೆಯಾಗಿದೆ ಎಂದರು. ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆಗೆ ರಾಜ್ಯಕ್ಕೆ ಕಳೆದ ಮೂರು ವರ್ಷದಲ್ಲಿ 5.246.22 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದು, ಇದರಲ್ಲಿ 4685.61 ಕೋಟಿ. ರೂ ಅನುದಾನದ ಬಳಕೆ ಆಗಿದೆ. ಬೆಂಗಳೂರು ಮೆಟ್ರೋ ಯೋಜನೆಗೆ ಪ್ರಸಕ್ತ 2021-22 ಸಾಲಿಗೆ 2982 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ 2328 ಕೋಟಿ ರೂ ಅನುದಾನದ ಬಳಕೆ ಆಗಿದೆ ಎಂದರು.


Spread the love

About inmudalgi

Check Also

ಬೆಟಗೇರಿಗ್ರಾಮ ಪಂಚಾಯ್ತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ