Breaking News
Home / Recent Posts / ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು

ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು

Spread the love

ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಖಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಪರಶುರಾಮ್ ಕುಲಕರ್ಣಿ ಹೇಳಿದರು.


ಅವರು ಮೂಡಲಗಿ ಚೈತನ್ಯ ಆಶ್ರಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಮೂಡಲಗಿ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಅಂಗವಿಕಲತೆಯನ್ನು ತಡೆಯಲು ಪ್ರತಿಯೊಬ್ಬರೂ ಕಂಕಣಬದ್ಧರಾಗಿ ಜನಜಾಗೃತಿ ಮಾಡಬೇಕು, ಸಮಾಜ ಸೇವಕ ಸಿದ್ದಣ್ಣ ದುರದುಂಡಿ ಅವರು ಮಾಡುವ ನಿಸ್ವಾರ್ಥ ಸೇವೆ ಕಾರ್ಯಗಳು ಶ್ಲಾಘನೀಯವಾಗಿದೆ ಎಂದರು.


ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಚೈತನ್ಯ ಆಶ್ರಮ ವಸತಿ ಶಾಲೆಯ ಮುಖ್ಯೋಪಾಧ್ಯಾಯೆ ಸಂಧ್ಯಾ ಎಸ್. ಪಾಟೀಲ್ ಮಾತನಾಡಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸಿಗುವಂತ ಪ್ರತಿಯೊಂದು ಸೌಲಭ್ಯಗಳನ್ನು ಅಂಗವಿಕಲರು ಪಡೆದುಕೊಂಡು ಪಡೆದುಕೊಳ್ಳುವುದರ ಜೊತೆಗೆ ತಮ್ಮ ಸ್ವಾವಲಂಬಿ ಜೀವನವನ್ನು ನಡೆಸಬೇಕು ಎಂದರು.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ, ಸಾಕಷ್ಟು ಅಂಗವಿಕಲರು ರಾಜ್ಯ ಮಟ್ಟದಲ್ಲಿ ರಾಷ್ಟ್ರ ಮಟ್ಟದಲ್ಲಿ ತಮ್ಮದೇ ಆಗಿರತಕ್ಕಂತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡು ಧೈರ್ಯ ಶಾಲಿಗಳಾಗಿ ಮುನ್ನುಗ್ಗುತ್ತಿದ್ದಾರೆ ಅಂಥವರ ಮಾರ್ಗದರ್ಶನಲ್ಲಿ ಗ್ರಾಮೀಣ ಭಾಗದ ಅಂಗವಿಕಲರು ಸಾಧನೆ ಮಾಡಬೇಕು, ಅಂಗವಿಕಲತೆಯನ್ನು ಹೋಗಲಾಡಿಸಲು ಪ್ರತಿಯೊಬ್ಬರೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದರು.


ಇದೇ ಸಂದರ್ಭದಲ್ಲಿ ಸಾಧಕ ಅಂಗವಿಕಲರಾದ ಗೋಕಾಕ್ ತಾಲೂಕು ಪಂಚಾಯತಿ ಎಂ.ಆರ್.ಡಬ್ಲ್ಯೂ ಎಸ್ ಐ ಖೈದ್ರಿ, ರಂಜಾನ್ ಗೋಕಾಕ, ಪರಶುರಾಮ್ ಕುಲಕರ್ಣಿ, ಹಾಲಪ್ಪ ಗಡ್ಡಿಕಾರ್, ಶಿವಲಿಂಗ ಬ್ಯಾಳಿ ನಿಂಗವ್ವ ಕುಲಗೂಡ ಶಾಲು ಮುತ್ತಿನ ಹಾರ ಹಾಕಿ ಸವಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಚೈತನ್ಯ ಶಾಲೆಯ ದೈಹಿಕ ಶಿಕ್ಷಕ ಮೈಬೂಬ್ ಬಂಡಿವಾಡ, ಬಾಳವ್ವ ಪಟ್ಟಣಶೆಟ್ಟಿ, ಸಿದ್ದಲಿಂಗ ಹೊಸಟ್ಟಿ, ಚೆನ್ನಪ್ಪ ಹುಕ್ಕೇರಿ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ ಅಂಗವಿಕಲರ ಸಂಘದ ಪದಾಧಿಕಾರಿಗಳು , ಅಂಗವಿಕಲರು ಮತ್ತಿತರು ಇದ್ದರು.
ಫೋಟೋ ಕ್ಯಾಪ್ಸನ್> ಮೂಡಲಗಿ: ಚೈತನ್ಯ ಶಾಲೆಯಲ್ಲಿ ಜರುಗಿದ ವಿಶ್ವ ಅಂಗವಿಕಲರ ದಿನಾಚರಣೆಯಲ್ಲಿ ಅಂಗವಿಕಲರನ್ನು ಸನ್ಮಾನಿಸಿ ಗೌರವಿಸಿದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ