ಮೂಡಲಗಿ: ದೇಶದಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮ (ಎನ್.ಎಸ್.ಡಿ.ಸಿ) ದಿಂದ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ರಾಜ್ಯದಲ್ಲಿ 35 ಪ್ರಧಾನ ಮಂತ್ರಿ ಕೌಶಲ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿ (ಪಿ.ಎಂ.ಕೆ.ವಿ.ವಾಯ್) ಇಲ್ಲಿಯವರೆಗೆ 1013 ತರಬೇತಿ ಕೇಂದ್ರಗಳ ಮೂಲಕ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಗುರುವಾರ ಡಿ.09 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರಗಳ ಕಾರ್ಯನಿರ್ವಹಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಷ್ಡ್ರೀಯ ಕೌಶಲ್ಯ ಅಭಿವೃದ್ದಿ ನಿಗಮದಿಂದ ರಾಜ್ಯಗಳಲ್ಲಿ ಸ್ಥಾಪಿಸಲಾದ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯನಿರ್ವಹಣೆಯನ್ನು ಮಾಡುತ್ತಿದೆ ಎಂದರು.
ದೇಶದ ಎಲ್ಲ ರಾಜ್ಯಗಳಿಂದ 67.64.793 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, ಇದರಲ್ಲಿ 53.25.097 ಅಭ್ಯರ್ಥಿಗಳನ್ನು ಪ್ರಮಾಣಿಕರಿಸಲಾಗಿದ್ದು, 23.59.109 ಅಭ್ಯರ್ಥಿಗಳ ನೇಮಕಾತಿ ಮಾಡಲಾಗಿದೆ ಅಲ್ಲದೇ ಕರ್ನಾಟಕ ರಾಜ್ಯದಲ್ಲಿ 2.26.492 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 1.77.546 ಅಭ್ಯರ್ಥಿಗಳನ್ನು ಪ್ರಮಾಣಿಕರಿಸಲಾಗಿದ್ದು, 73.346 ಅಭ್ಯರ್ಥಿಗಳ ನೇಮಕಾತಿ ಮಾಡಲಾಗಿದೆ ಎಂದರು.
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …