ಮೂಡಲಗಿ: ಕರ್ನಾಟಕದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಗಾಗಿ ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ರೂ.3161.82 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ರೂ. 2445.28 ಲಕ್ಷ ರೂ ಅನುದಾನ ಬಳಕೆಯಾಗಿದ್ದು, ರೂ. 716.54 ಲಕ್ಷ ರೂ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ ಮುಂಡಾ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ನವದೆಹಲಿ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಅರ್ಜುನ ಮುಂಡಾ ಲಿಖಿತವಾಗಿ ಉತ್ತರಿಸಿದ ಅವರು, ಕರ್ನಾಟಕ ಸರ್ಕಾರವು ಸೂಚಿಸಿದಂತೆ ಮೈಸೂರು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಐದು ಜಿಲ್ಲೆಗಳಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಗಾಗಿ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಕಳೆದ ಮೂರು ವರ್ಷಗಳಲ್ಲಿ ಸಿ.ಸಿ. ರಸ್ತೆಗಳು ಮತ್ತು ಚರಂಡಿ, ಸಮುದಾಯ ಭವನ, ಡೈರಿ ಅಭಿವೃದ್ಧಿ ಯೋಜನೆಗಳು, ಹಸು ಸಾಕಣೆ, ಸರಕು ವಾಹನ, ಹಂದಿ ಸಾಕಾಣಿಕೆÉ, ಕುರಿ/ಮೇಕೆ ಸಾಕಾಣಿಕೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.