ಮೂಡಲಗಿ : ಇಂದಿನ ಅಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಚಿಂತನೆ ಮಾಡುವದು ತುಂಬಾ ಅವಶ್ಯವಾಗಿದೆಯಲ್ಲದೆ ವಿಜ್ಞಾನದ ಬಗ್ಗೆ ತಿಳಿದುಕೊಳ್ಳುವದೂ ಕೂಡ ಅದ್ಯಯನದ ಮಹತ್ವದ ಅಂಶವಾಗಿದೆ ಎಂದು ವಡೇರಹಟ್ಟಿಯ ಸಮೂಹ ಸಂಪನ್ಮೂಲ ವ್ಯಕ್ತಿ ಆನಂದ ಹಮ್ಮನವರ ಹೇಳಿದರು.
ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರ್ರಾಥಮಿಕ ಶಾಲೆಯಲ್ಲಿ ನಡೆದ ವಾರದ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಹಮ್ಮಿಕೊಳ್ಳುವದರ ಮುಖಾಂತರ ವಿದ್ಯಾರ್ಥಿಗಳಿಗೆ ವಿಷಯವನ್ನು ಪ್ರಾಯೋಗಿಕವಾಗಿ ತಿಳಿಸಿಕೊಡಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಅವರು ಎಂಟನೇ ತರಗತಿಯ ಮಕ್ಕಳಿಗೆ ಕಳೆದ ವರ್ಷದ ಎನ್.ಎಮ್.ಎಮ್.ಎಸ್. ಪ್ರಶ್ನೆಪತ್ರಿಕೆಯನ್ನು ಬಿಡಿಸುವದರ ಜೊತೆಗೆ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿತೆ ಮಾಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.
ಮುಖ್ಯಾದ್ಯಾಪಕ ಎ.ವ್ಹಿ.ಗಿರೆಣ್ಣವರ ಮಾತನಾಡಿ ಪ್ರತಿವಾರ ವಾರದ ಅತಿಥಿ ಕಾರ್ಯಕ್ರಮದಲ್ಲಿ ಬೇರೆ ಬೇರೆ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರಿಂದ ಮಕ್ಕಳಿಗೆ ಉಪನ್ಯಾಸ ಕೊಡಿಸಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದರು
ಕಲ್ಲೋಳಿ ಸಮೂಹ ಸಪಂನ್ಮೂಲ ವ್ಯಕ್ತಿ ಜಿ.ಕೆ. ಉಪ್ಪಾರ ಮಾತನಾಡಿ ನಿರಂತರ ಅದ್ಯಯನದೊಂದಿಗೆ ವಿದ್ಯಾರ್ಥಿಗಳು ಭವಿಷ್ಯ ಕಟ್ಟಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮವನ್ನು ಶಿಕ್ಷಕ ಎಮ್.ಡಿ. ಗೋಮಾಡಿ ನಿರೂಪಿಸಿದರು. ವಿಜ್ಞಾನ ಶಿಕ್ಷಕರಾದ ಸಂಗೀತಾ ತಳವಾರ ವಂದಿಸಿದರು.
