ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್‍ಬಾಲ್ ಬ್ಲೂ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಚಮಕೇರಿ ಇವರು ಪ್ರಸಕ್ತ ಸಾಲಿನ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹ್ಯಾಂಡ್‍ಬಾಲ್ ಮಹಿಳಾ ತಂಡಕ್ಕೆ ಆಯ್ಕೆಯಾಗಿ ಬ್ಲೂ ಆಗಿದ್ದಾರೆ.
ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ಪ್ರಾಚಾರ್ಯ ಡಾ. ಎಂ.ಕೆ. ಕಂಕಣವಾಡಿ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
IN MUDALGI Latest Kannada News