ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆದು ಭವಿಷ್ಯ ರೂಪಿಸಿಕೊಳ್ಳಿ- ಮರ್ದಿ
ಮೂಡಲಗಿ: ಕರೋನಾ ಆತಂಕದಲ್ಲಿಯೂ ಶಿಕ್ಷಣ ಇಲಾಖೆ ತನ್ನ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುತ್ತಿರುವದು ಶ್ಲಾಘನೀಯ. ಶಿಕ್ಷಣ ಇಲಾಖೆಯ ಇಂತಹ ಹಲವಾರು ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ನೀಮಿಸಿಕೊಳ್ಳಬೇಕೆಂದು ತುಕ್ಕಾನಟ್ಟ್ಟಿಯ ಗಾಮ ಪಂಚಾಯತ ಅಧ್ಯಕ್ಷರಾದ ಕುಮಾರ ಮರ್ದಿ ಹೇಳಿದರು.
ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥÀಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ಉಚಿತ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿ, ತಮ್ಮ ಗ್ರಾಮ ಪಂಚಾಯತಿ ವತಿಯಿಂದ ತಮ್ಮ ವಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವದಾಗಿ ಹೇಳಿದರು.
ಅತಿಥಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ವೀರಭದ್ರ ಗುಂಡಿ ಮಾತನಾಡಿ, ಕರೋನಾ ವೈರಸ್ ರಾಜ್ಯದಲ್ಲಿ ಮತ್ತೆ ಹರಡುತ್ತಿರುವ ಲಕ್ಷಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ದಿನನಿತ್ಯ ಶಾಲೆಗೆ ಹಾಜರಾಗಿ ಸಮಯ ಹಾಗೂ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಶಿಕ್ಷಣ ಇಲಾಖೆಗೆ ನಾವು ಯಾವಾಗಲೂ ಹೆಚ್ಚಿನ ಪ್ರಾಶಸ್ಥ್ಯ ನೀಡುವದು ನಮ್ಮ ಕರ್ತವ್ಯವಾಗಿದೆ ಎಂದರು.
ಇನ್ನೋರ್ವ ಅತಿಥಿ ಗ್ರಾಮ ಪಂಚಾಯತ ಉಪಾಧ್ಯಕ್ಷೆ ಮಹಾದೇವಿ ಗದಾಡಿ ಮಾತನಾಡಿ, ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಪ್ರಾರಂಭವಾಗಿರುವದರಿಂದ ವಿದ್ಯಾರ್ಥಿಗಳು ಅಭ್ಯಾಸದಿಂದ ವಂಚಿತರಾಗದೇ ದಿನಾಲು ತರಗತಿಗಳಿಗೆ ಹಾಜರಾಗಿ ಸರ್ಕಾರಿ ಸೌಲಭ್ಯ ಪಡೆದು ಶಿಕ್ಷಣಕ್ಕೆ ಹೆಚ್ಚು ಲಕ್ಷ ಕೊಡಬೇಕು ಎಂದರು.
ಅಧ್ಯಕ್ಷತೆಯನ್ನು ಶಾಲೆ ಪ್ರಧಾನ ಗುರು ಎ.ವ್ಹಿ.ಗಿರೆಣ್ಣವರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮಹಾದೇವ ಗೋಮಾಡಿ ಲಕ್ಷ್ಮೀ ಹೆಬ್ಬಾಳ, ಪುಷ್ಪಾ ಭರಮದೆ, ಕುಸುಮಾ ಚಿಗರಿ, ಶೀಲಾ ಕುಲಕರ್ಣಿ, ಸಂಗೀತಾ ತಳವಾರ, ವಿಮಲಾಕ್ಷಿ ತೋರಗಲ್, ಶಂಕರ ಲಮಾಣಿ, ಕೆ.ಅರ್. ಭಜಂತ್ರಿ, ಎಮ್.ಕೆ.ಕಮ್ಮಾರ ಎಮ್.ಡಿ.ಗೋಮಾಡಿ ಉಪಸ್ಥಿತÀರಿದ್ದರು.