Breaking News
Home / Recent Posts / ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ

ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ

Spread the love

ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ

ಮೂಡಲಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕೋವಿಡ್-19 ಪರೀಕ್ಷೆ ಕೈಗೊಳ್ಳಲು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.

ಮಂಗಳವಾರ ಜ.25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸುಮಾರು 53 ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಆ ಕಾರಣದಿಂದ ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ ಅಂತರದಲ್ಲಿರುವ ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವಂತೆ ಹಲವಾರು ಬಾರಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಅವರನ್ನು ಗೋಕಾಕನಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವಂತೆ ಒತ್ತಾಯ ಮಾಡಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ ಇವರುಗಳ ನೇತೃತ್ವದಲ್ಲಿ ಬೆಳಗಾವಿಯ ಸುರ್ವರ್ಣ ಸೌಧದಲ್ಲಿ ಜರುಗಿದ ಕೋವಿಡ ನಿಯಂತ್ರಣ ಮತ್ತು ಪರಿಶೀಲನಾ ಸಭೆಯಲ್ಲಿ ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವಂತೆ ಒತ್ತಾಯಿಸಲಾಗಿತ್ತು. ಸಭೆ ಮುಗಿದ ನಂತರ ಅಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭೌಗೋಳಿಕವಾಗಿ ಬೆಳಗಾವಿ ಜಿಲ್ಲೆ ಬಹಳ ದೊಡ್ಡದಾದ ಕಾರಣ ಹಾಗೂ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಕಾರಣ ಕೋವಿಡ್ ಪರೀಕ್ಷಾ ಫಲಿತಾಂಶಗಳು ಸಾರ್ವಜನಿಕರಿಗೆ ವಿಳಂಬವಾಗಿ ತಲುಪುತ್ತಿರುವ ಕಾರಣದಿಂದ ತುಂಬಾ ತೊಂದರೆಯಾಗುತ್ತಿದೆ. ಆದಕಾರಣ ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಅತಿ ಶೀಘ್ರದಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ ಕೇಂದ್ರ ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದರು.
ಗೋಕಾಕನಲ್ಲಿ ಪ್ರಾರಂಭ ಮಾಡುವ ಮುಖಾಂತರ ಕೋವಿಡ್ ಉಪಟಳದಿಂದ ಭಾದಿತರಾಗುತ್ತಿರುವ ಜಿಲ್ಲೆಯ ಸಾರ್ವಜನಿಕ ಆರೋಗ್ಯದ ಹಿತದೃಷ್ಠಿಯಿಂದ ಜನರ ಸಹಾಯಕ್ಕೆ ಬಂದ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತ ಅಭಿನಂದಿಸುವುದಾಗಿ ತಿಳಿಸಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ ಅವರು ತಕ್ಷಣ ಕ್ರಮವನ್ನು ತೆಗೆದುಕೊಂಡ ನಿರ್ಧಾರಕ್ಕೆ ಸ್ವಾಗತಿಸುವುದಾಗಿ ಈರಣ್ಣ ಕಡಾಡಿ ತಿಳಿಸಿದರು.

 


Spread the love

About inmudalgi

Check Also

ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ

Spread the loveಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ  ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ