ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ
ಮೂಡಲಗಿ: ಇಲ್ಲಿಯ ಕಾಲೇಜು ರಸ್ತೆಯಲ್ಲಿ ಸುಸಜ್ಜಿತವಾದ ಮತ್ತು ಹೊಸ ತಂತ್ರಜ್ಞಾನದ ಕಣ್ಣು ತಪಾಸಣೆ, ವಿವಿಧ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಸೌಲಭ್ಯವನ್ನು ಹೊಂದಿರುವ ಡಾ. ಸಚೀನರವರ ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆಯ ಜ. 31ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ. ಶ್ರೀ ಮಹಾಲಕ್ಷ್ಮೀ ಮತ್ತು ಶ್ರೀ ಸರಸ್ವತಿ ಪೂಜೆಯೊಂದಿಗೆ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮೀಜಿಗಳು ಆಸ್ಪತ್ರೆಯನ್ನು ಉದ್ಘಾಟಿಸುವರು ಎಂದು ಡಾ. ಸಚೀನ ಟಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.