Breaking News
Home / Recent Posts / ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ

ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ

Spread the love

ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ
ಮೋದಿ ಸರ್ಕಾರ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ

ಮೂಡಲಗಿ: ದೇಶದಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ವಿರೋಧ ಪಕ್ಷಗಳು ಕೃಷಿ ಕಾನೂನುಗಳನ್ನು ಅಪಪ್ರಚಾರ ಮಾಡಿ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ ಆದರೂ ರೈತರ ಪರವಾಗಿ ಕೇಂದ್ರ ಸರ್ಕಾರ ಬದ್ದತೆ ಪ್ರದರ್ಶನ ಮಾಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಬಜೆಟ್‍ನ್ನು ಸ್ವಾಗತಿಸಿದ್ದಾರೆ.
ಮಂಗಳವಾರ ಫೆ-01 ರಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡದ ಸಂಸದ ಈರಣ್ಣ ಕಡಾಡಿ ಅವರು 2022-23ನೇ ಸಾಲಿನ ಬಜೆಟ್ ಮೊತ್ತ ರೂ. 39.54 ಲಕ್ಷ ಕೋಟಿ ಗಾತ್ರದಾಗಿದ್ದು, ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.
ರೈತರಿಗಾಗಿ ‘ಒನ್ ಸ್ಟೇಷನ್ ಒನ್ ಪ್ರಾಡಕ್ಟ್’ ಯೋಜನೆ ಅನುμÁ್ಠನ, 2023ರ ವರ್ಷವನ್ನು ಸಿರಿ ಧಾನ್ಯಗಳ ವರ್ಷವೆಂದು ಘೋಷಣೆ, ಕೃಷಿ ವಿಶ್ವವಿದ್ಯಾಲಯಕ್ಕೆ ಉತ್ತೇಜನ, 400 ವಂದೇ ಭಾರತ ರೈಲುಗಳ ಘೋಷಣೆ, 2022-23ರಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ 80 ಲಕ್ಷ ಮನೆಗಳ ನಿರ್ಮಾಣದ ಗುರಿ, 2 ಲಕ್ಷ ಅಂಗನವಾಡಿಗಳ ಆಧುನೀಕರಣ, ಕಾವೇರಿ-ಪೆನ್ನಾರ್ ನದಿ ಜೋಡಣೆ ಯೋಜನೆಯನ್ನು ರೂ. 44,605 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಈ ಯೋಜನೆ ಜಾರಿಯಾದರೆ 9 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ ಎಂದರು.
ಪಿಎಂ ಇ-ವಿದ್ಯಾ ಯೋಜನೆಯಡಿ 400 ಶಿಕ್ಷಣ ಚಾನಲ್‍ಗಳ ಆರಂಭ, 1 ಕೋಟಿಯಿಂದ 10 ಕೋಟಿ ರೂ. ಆದಾಯ ಇರುವ ಸಹಕಾರಿ ಸಂಘಗಳ ಮೇಲಿನ ತೆರಿಗೆ ಶೇ 12 ರಿಂದ ಶೇ 7ಕ್ಕೆ ಇಳಿಕೆ. ಇದು ಗ್ರಾಮೀಣ ಮತ್ತು ಕೃಷಿ ಸಮುದಾಯಗಳಿಂದ ಬಂದಿರುವ ಸಹಕಾರ ಸಂಘಗಳು ಮತ್ತು ಅದರ ಸದಸ್ಯರ ಆದಾಯ ಹೆಚ್ಚಿಸಲು ಸಹಕಾರಿಯಾಗಲಿದೆ. ಸಶಕ್ತ, ಸ್ವಾವಲಂಬಿ ನವಭಾರತ ನಿರ್ಮಾಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಅತ್ಯಂತ ಆಶಾದಾಯಕವಾಗಿದೆ ಎಂದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ