Breaking News
Home / Recent Posts / ತಾಲ್ಲೂಕಿನಲ್ಲಿ ಸಾಂಸ್ಕøತಿಕ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು

ತಾಲ್ಲೂಕಿನಲ್ಲಿ ಸಾಂಸ್ಕøತಿಕ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು

Spread the love

  
ತಾಲ್ಲೂಕಿನಲ್ಲಿ ಸಾಂಸ್ಕøತಿಕ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು

ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್‍ದಿಂದ ಪ್ರತಿ ತಾಲ್ಲೂಕಿಗೆ ಕನ್ನಡ ಸಾಂಸ್ಕøತಿಕ ಭವನ ನಿರ್ಮಿಸುವುದಕ್ಕೆ ಮೊದಲ ಅದ್ಯತೆ ನೀಡುವೆನು’ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.
ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ನೂತನ ಘಟಕದ ಕಾರ್ಯಕಾರಿಣಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಕನ್ನಡ ಸಾಹಿತ್ಯವನ್ನು ಮನೆ, ಮನೆಗೆ ತಲುಪಿಸುವ ಕಾರ್ಯವು ಸಾಹಿತ್ಯ ಪರಿಷತದಿಂದ ಆಗಬೇಕು ಎಂದರು.
ಸರ್ಕಾರಿ ಕನ್ನಡ ಶಾಲೆಗಳ ಬೆಳವಣಿಗೆಗೆ ಕಸಾಪ ತಾಲ್ಲೂಕು ಘಟಕಗಳು ಕಂಕಣಬದ್ದವಾಗಬೇಕು. ಸರ್ಕಾರಿ ಕನ್ನಡ ಶಾಲೆಗಳು ಮುಚ್ಚದಂತೆ ಕಣ್ಗಾವಲು ಇಡಬೇಕು ಎಂದರು.
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸಾಹಿತ್ಯ ಬರವಣಿಗೆಗಳ ಮೂಲಕ ಗುರುತಿಸಿಕೊಳ್ಳಬೇಕು. ಮಹಿಳಾ ಸಾಹಿತಿಗಳನ್ನು ಕಡೆಗಾಣಿಸಬಾರದು ಎಂದರು.
ಅಧ್ಯಕ್ಷತೆವಹಿಸಿದ್ದ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಮಾತನಾಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ಚಿತ್ರಕಲೆ, ಶಿಲ್ಪಕಲೆ, ಆಧ್ಯಾತ್ಮಿಕ ಹೀಗೆ ಎಲ್ಲದರಲ್ಲೂ ಕನ್ನಡ ನಾಡು ಶ್ರೀಮಂತಿಕೆಯನ್ನು ಹೊಂದಿರುವ ನಾಡು ಆಗಿದೆ ಎಂದರು.
ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯವನ್ನು ಜಗತ್ತಿಗೆ ನೀಡಿದ್ದು, ಕನ್ನಡದಲ್ಲಿ 25 ಸಾವಿರಕ್ಕೂ ಅಧಿಕ ಶಾಸನಗಳನ್ನು ಹೊಂದಿದೆ. ಶ್ರೀವಿಜಯ, ಪಂಪ, ರನ್ನ, ಪೊನ್ನರಿಂದ ಹಿಡಿದು ಕುವೆಂಪು ಅವರ ಸಮಕಾಲೀನತೆ ಒಡಗೂಡಿ ಇಂದಿಗೂ ಕನ್ನಡ ಸಾಹಿತ್ಯದ ಬೆಳವಣಿಗೆಯು ಅಗಾಧವಾಗಿದೆ ಎಂದರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಪ್ರಾಸ್ತಾವಿಕ ಮಾತನಾಡಿ ಪರಿಷತ್‍ವು ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ತಾಲ್ಲೂಕಿನಲ್ಲಿ ಸಾಹಿತ್ಯಕ ವಾತಾವರಣವನ್ನು ಮೂಡಿಸುವ ಉದ್ದೇಶವನ್ನು ಹೊಂದಿರುವೆವು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುರುಹಿನಶೆಟ್ಟಿ ಸೊಸೈಟಿ ಅಧ್ಯಕ್ಷ ಬಸವಣ್ಣಿ ಮುಗಳಖೋಡ, ಬಾಲಶೇಖರ ಬಂದಿ, ಕಸಾಪ ನಿಕಟಪೂರ್ವ ಅಧ್ಯಕ್ಷ ಸಿದ್ರಾಮ್ ದ್ಯಾಗಾನಟ್ಟಿ ಮಾತನಾಡಿದರು.
ಕರ್ನಲ್ ಡಾ. ಪರಶುರಾಮ ನಾಯಿಕ ಅವರು ರಚಿಸಿರುವ ಶುದ್ಧಿ ಪುಸ್ತಕವನ್ನು ಸಮಾರಂಭದಲ್ಲಿ ಬಿಡುಗಡೆ ಮಾಡಿದರು. ನೂತನ ಘಟಕದ ಕಾರ್ಯಕಾರಿಣಿ ಸಮಿತಿಯ ಪದಾಧಿಕಾರಿಗಳಿಗೆ ಪದಗ್ರಹಣವು ಜರುಗಿತು.
ಕಾರ್ಮಿಕ ಇಲಾಖೆಯ ವಿಭಾಗೀಯ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಸಿದ್ದಪ್ಪ ನಾಯಿಕ, ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷ ಮೋಹನ ಪಾಟೀಲ, ಪ್ರೊ. ಸುಭಾಷ ಕಮದಾಳ, ಡಾ. ಮಹಾದೇವ ಜಿಡ್ಡಿಮನಿ, ಸುರೇಶ ಲಂಕೆಪ್ಪನ್ನವರ ವೇದಿಕೆಯಲ್ಲಿದ್ದರು.
ಬಸವಂತಪ್ಪ ತರಕಾರ ಸ್ವಾಗತಿಸಿದರು, ಚಿದಾನಂದ ಹೂಗಾರ, ಡಾ. ಮಹಾದೇವ ಪೋತರಾಜ ನಿರೂಪಿಸಿದರು, ಮಹಾವೀರ ಸಲ್ಲಾಗೋಳ ವಂದಿಸಿದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ