Breaking News
Home / Recent Posts / ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ – ರಜನಿ ಜೀರಗಾಳೆ

ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ – ರಜನಿ ಜೀರಗಾಳೆ

Spread the love

ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ –  ರಜನಿ ಜೀರಗಾಳೆ

ಮೂಡಲಗಿ : ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಸಿರಿಗನ್ನಡ ಮಹಿಳಾ ವೇದಿಕೆ ರಾಜ್ಯ ಅಧ್ಯಕ್ಷರಾದ ರಜನಿ ಜೀರಗಾಳೆ ಹೇಳಿದರು.
ಅವರು ವಡರಟ್ಟಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಪ್ರಗತಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸರ್ಕಾರಿ ಸಂಘ ಯಾದವಾಡ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಚೇತನ ಕ್ರೀಡಾ ಯುವಕ ಸಂಘ ಹೊಸಟ್ಟಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಭಾರತ ದೇಶದಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನವಿದೆ ಅದನ್ನು ಗೌರವದಿಂದ ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಮ್ಮ ನಿಮ್ಮ ಮೇಲೆ ಇದೆ ಎಂದು ನುಡಿದರು.


ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ ಎಲ್ಲಿ ಸ್ತ್ರೀಯರಿಗೆ ಸ್ವಾತಂತ್ರ‍್ಯವಿಲ್ಲವೇ ಅಲ್ಲಿ ಸ್ತ್ರೀ ನಾಲ್ಕು ಗೋಡೆಗಳ ಮಧ್ಯೆ ಬಂಧನದಲ್ಲಿದ್ದಾಳೆ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಗಾದೆಯಂತೆ ಮಹಿಳೆ ಉನ್ನತ ಸ್ಥಾನದಲ್ಲಿ ಇರಬೇಕಾದರೆ ಸಮಾಜದಲ್ಲಿ ಅವಳಿಗೆ ಶಿಕ್ಷಣ ಹಾಗೂ ವಿಶೇಷ ಸ್ಥಾನಮಾನ ನೀಡುವ ಅವಶ್ಯಕತೆ ಬಹಳ ಇದೆ ಎಂದು ಹೇಳಿದರು. ಗೋಕಾಕದ ಮಹಿಳಾ ಸಾಹಿತಿ ಜಯಾ ಚುನುಮುರಿ ಮಾತನಾಡಿ ಬಸವಣ್ಣನವರ ಮತ್ತು ಶರಣರ ಕಾಲದ ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನವಿತ್ತು ಅಕ್ಕಮಹಾದೇವಿ ಪ್ರಥಮ ವಚನಕಾರ್ತಿ ಯಾಗಿ ನಮ್ಮ ನಾಡಿನ ಸಂಸ್ಕೃತಿಯನ್ನು ವಚನದ ಮೂಲಕ ಸಾರಿದರು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಎಸ್ ಐ ಭಾಗೋಜಿ ಮಾತನಾಡಿ ಹಿಂದಿನ ಕಾಲದಲ್ಲಿ ಸತಿಸಹಗಮನ ಪದ್ಧತಿ ಅಂತ ಇತ್ತು ಸಮಾಜ ಸುಧಾರಕರ ಕಾರ್ಯದಿಂದಾಗಿ ಅಂತಹ ಅನಿಷ್ಟ ಪದ್ಧತಿಗಳು ದೂರವಾಗಿ ಇವತ್ತಿನ ಕಾಲದ ಮಹಿಳೆಯರು ಸ್ವತಂತ್ರವಾಗಿ ಬದುಕುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು.


ಕಾರ್ಯಕ್ರಮದಲ್ಲಿ ಪ್ರಗತಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಿ ಮಾಳೆದ ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ರಾಘವೇಂದ್ರ ದೊಡ್ಡವಾಡ,ಉಪನ್ಯಾಸಕರಾದ ಎಮ್.ಜಿ.ದೇವಡಿ, ಎ.ವಿ.ಮೆಳವೆಂಕಿ, ಎಲ್.ಎಸ್.ವಾರೆಪ್ಪಗೊಳ, ಅಕ್ಕಮಹಾದೇವಿ ಮಾದರ ಶಾಂಭವಿ ದೇವರುಶಿ, ಲಕ್ಷ್ಮಿ ಜೋಕನಾಟ್ಟಿ ಹಾಗೂ ಉಪನ್ಯಾಸಕರು ಸಂಘಟಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ರಂಗೋಲಿ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ

ವಿಜೇತರಾದವರಿಗೆ ಮೆಡಲ್ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.


Spread the love

About inmudalgi

Check Also

ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಅದರ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ

Spread the love ಗೋಕಾಕ- ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ