ಮೂಡಲಗಿ: ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಕುಲಗೋಡ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹೇಳಿದರು.
ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಮುಖ್ಯ ರಸ್ತೆಯ ಪಕ್ಕದಲ್ಲಿ ಜಿಲ್ಲಾ ಪಂಚಾಯತ ಅನುದಾನದಲ್ಲಿ ಸೂಮಾರು ೭೫ ಲಕ್ಷ ರೂಪಾಯಿ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಕುಲಗೋಡ ಗ್ರಾಮಸ್ಥರಿಗೆ ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಅರಭಾAವಿ ಮತಕ್ಷೇತ್ರ ವ್ಯಾಪ್ತಿಯ ಕುಲಗೋಡ ಗ್ರಾಮಕ್ಕೆ ಧಾರ್ಮಿಕ, ಸಾಮಾಜಿಕ ಹಾಗೂ ವಿವಿಧ ವಲಯದ ಮೂಲಭೂತ ಅವಶ್ಯಕ ಹಾಗೂ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕೆಲಸಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.
ಈ ಸಂಧರ್ಭದಲ್ಲಿ ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲ್ಲಿಕಾರ್ಜುನ ಯಕ್ಸಂಬಿ, ಬಸನಗೌಡ ಪಾಟೀಲ, ಸುಭಾಸ ವಂಟಗೋಡಿ, ಸತೀಶ ವಂಟಗೋಡಿ, ಬಸವರಾಜ ಯರಗಟ್ಟಿ, ವಿಜಯಕುಮಾರ ಜಡ್ಲಿ, ಗೋಪ್ಪಾಲ ತಿಪ್ಪಿಮನ್ನಿ, ಪ್ರಕಾಶ ಬಿಸನಕೊಪ್ಪ, ಸದಾ ಬಡಕಲ್, ಗ್ರಾ.ಪಂ ಪಿಡಿಒ ಸದಸಾಶಿವ ದೇವರ, ಮತ್ತಿತರರು ಇದ್ದರು