ಮೂಡಲಗಿ: ಜವಾಹರಲಾಲ ನವೋದಯ ವಿದ್ಯಾಲಯಗಳಿಗೆ ೬ ನೇ ತರಗತಿಗೆ ನಡೆಯುವ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಏ. ೩೦ ಶನಿವಾರದಂದು ಜರುಗುವವು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದಲ್ಲಿ ೧೫ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೨೯೮೬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದು, ಇದು ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಡಲಗಿ ವಲಯದಿಂದ ಕಳೇದ ವರ್ಷ ಜವಾಹರ ನವೋದಯ ವಿದ್ಯಾಲಯಕ್ಕೆ ೮೦ ವಿದ್ಯಾರ್ಥಿಗಳ ಪೈಕಿ ೧೯ ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು ದಾಖಲಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿಯು ೫ ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಮಾರ್ಗದರ್ಶನ ಮಾಗೂ ಸಂಪನ್ಮೂಲ ಸಾಹಿತ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವದು, ವಿಶೇಷ ತರಗತಿಗಳ ಆಯೋಜನೆ, ತಾಲೂಕಾ ಹಂತದಿಂದ ಪರೀಕ್ಷಾ ಮಾರ್ಗದರ್ಶಿ ಕೈಪಿಡಿಗಳು, ಹಿಂದಿನ ಪ್ರಶ್ನೆ ಪತ್ರಿಕೆಗಳ ಉಜಳನೆ, ಮಾದರಿ ಪರೀಕ್ಷೆಗಳು, ಗುಂಪು ಅಧ್ಯಯನಗಳಂತಹ ಕಾರ್ಯಗಳನ್ನು ಆಯೋಜಿಸಲಾಗಿದೆ. ಸಮೂಹ ಮಾದ್ಯಮಗಳಾದ ವಾಟ್ಸ್ಫ್ ಗ್ರುಫ್ ರಚಿಸಿ ಶಿಕ್ಷಕರಿಗೆ ಅಗತ್ಯ ಸಲಹೆ ಸೂಚನೆ ಸಾಹಿತ್ಯಗಳನ್ನು ಪೂರೈಕೆ ಮಾಡುವ ಮೂಲಕ ಪರೀಕ್ಷೆಗೆ ಸಜ್ಜು ಗೋಳಿಸಲಾಗಿದೆ.
೧೫ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧಿಕ್ಷಕರು, ಸಿ.ಎಲ್.ಒ, ಕೊಠಡಿ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಸೂಕ್ತ ಬಂದೋ ಬಸ್ತಿಗಾಗಿ ಪೋಲಿಸರ ನಿಯೋಜನೆ ಮಾಡಲಾಗಿದೆ. ಹೆಸ್ಕಾಂ ಅಧಿಕಾರಿಗಳಿಗೆ ವಿದ್ಯುತ್ ಸಂಪರ್ಕ ಕುರಿತು, ಪುರಸಭೆಯವರಿಗೆ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್ ಮಾಡಲಾಗಿದೆ. ಕುಡಿಯುವ ನೀರು, ಆಸನ, ಗಾಳಿ ಬೆಳಕಿನ ವ್ಯವಸ್ಥೆ, ಶೌಚಾಲಯ, ಆರೋಗ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಕಛೇರಿ ಸಿಬ್ಬಂದಿಗಳಾದ ಜುನೇದ ಪಟೇಲ್, ಟಿ. ಕರಿಬಸವರಾಜು, ಸತೀಶ ಬಿ.ಎಸ್ ಇವರಿಂದ ಪರಿಶೀಲಿಸಿ ಅಗತ್ಯ ಕ್ರಮವಹಿಸಲಾಗಿದೆ. ಕೋವಿಡ್-೧೯ ಅನ್ವಯ ಮಾಸ್ಕ್ ಸಾಮಾಜಿಕ ಅಂತರಗಳಂತಹ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ತರಬೇತಿ ಕಾರ್ಯಗಳನ್ನು ಕೈಗೋಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home / Recent Posts / ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯ ಬಿಇಒ ಅಜಿತ ಮನ್ನಿಕೇರಿ
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …