Breaking News
Home / Recent Posts / ಬಾಲಶೇಖರ ಬಂದಿ ಅವರಿಗೆ ಅಂತರ್‍ರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಂಸನಾ ಪ್ರಶಸ್ತಿ

ಬಾಲಶೇಖರ ಬಂದಿ ಅವರಿಗೆ ಅಂತರ್‍ರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಂಸನಾ ಪ್ರಶಸ್ತಿ

Spread the love

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಅವರಿಗೆ ಅಂತರ್‍ರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಂಸನಾ ಪ್ರಶಸ್ತಿಯನ್ನು ಲಯನ್ಸ್ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಇತ್ತಿಚೆಗೆ ಗೋವಾದಲ್ಲಿ ಜರುಗಿದ ವಾರ್ಷಿಕ ಸಮಾವೇಶದಲ್ಲಿ ಪ್ರದಾನ ಮಾಡಿದರು
ಬಾಲಶೇಖರ ಬಂದಿಗೆ ಅಂತರ್‍ರಾಷ್ಟ್ರೀಯ ಲಯನ್ಸ್ ಪ್ರಶಸ್ತಿ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಅವರು ಅಂತರ್‍ರಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರ ಪ್ರಶಂಸನಾ ಪ್ರಶಸ್ತಿ ಪಡೆದುಕೊಂಡಿದ್ದಾರೆ.
2021-22ನೇ ಸಾಲಿನಲ್ಲಿ ಪರಿಸರ ಕಾಳಜಿ, ನೇತ್ರ, ದಂತ, ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ (ಬಿಪಿ) ಹಲವಾರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸಂಘಟನೆ, ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಪಾಕ್ಷಿಕ ಅನ್ನದಾಸೋಹ, ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪಶು ಆರೋಗ್ಯ ಉಚಿತ ತಪಾಸಣೆ ಶಿಬಿರಗಳ ಸಂಘಟನೆ, ಸ್ವಚ್ಛತಾ ಅಭಿಯಾನ, ಕಲಾವಿದರಿಗೆ ಸಹಾಯ, ಸಸಿಗಳ ವಿತರಣೆ ಸೇರಿದಂತೆ 80ಕ್ಕೂ ಅಧಿಕ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಮಾಡಿದ್ದನ್ನು ಪರಿಗಣಿಸಿ ಪ್ರಶಸ್ತಿ ನೀಡಿರುವರು.
ಇತ್ತಿಚೆಗೆ ಗೋವಾದಲ್ಲಿ ಜರುಗಿದ ಲಯನ್ಸ್ ಕ್ಲಬ್ ಜಿಲ್ಲಾ ವಾರ್ಷಿಕ ಸಮಾವೇಶದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಎಲ್ಲ ಸದಸ್ಯರು ಬಾಲಶೇಖರ ಬಂದಿ ಅವರನ್ನು ಅಭಿನಂದಿಸದ್ದಾರೆ.


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ