Breaking News
Home / Recent Posts / ಮೂಲಸೌಕರ್ಯ ಸೌಲಭ್ಯಗಳಿಗೆ 61.82 ಕೋಟಿ ರೂ.ಗಳ ಆರ್ಥಿಕ ಸಹಾಯಕ್ಕೆ ಅನುಮೋದನೆ

ಮೂಲಸೌಕರ್ಯ ಸೌಲಭ್ಯಗಳಿಗೆ 61.82 ಕೋಟಿ ರೂ.ಗಳ ಆರ್ಥಿಕ ಸಹಾಯಕ್ಕೆ ಅನುಮೋದನೆ

Spread the love

ಮೂಡಲಗಿ: ಸಾಗರಮಾಲಾ ಯೋಜನೆಯಡಿ ಕರ್ನಾಟಕದ ಜಲಮಾರ್ಗಗಳಲ್ಲಿ ಪ್ರಯಾಣಿಕರ ಆಸನಗಳ ವ್ಯವಸ್ಥೆ ನಿರ್ಮಾಣ ಮತ್ತು ಮೂಲಸೌಕರ್ಯ ಸೌಲಭ್ಯಗಳಿಗೆ 61.82 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಬಂದರಗಳು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಒಳನಾಡು ಜಲಮಾರ್ಗಗಳ ಮೂಲಕ ಕರ್ನಾಟಕದಲ್ಲಿ ನಾಗರಿಕ ಪ್ರಯಾಣವನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕದ ಆಲಮಟ್ಟಿಯಿಂದ ಬಾಗಲಕೋಟೆಯವರೆಗೆ ಜಲಮಾರ್ಗದ ಅಭಿವೃದ್ದಿ ಕಾಮಗಾರಿಗೆ 12.20 ಕೋಟಿ ರೂ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಘನಾಶಿನಿ ಜಲಮಾರ್ಗದ ಅಭಿವೃದ್ದಿ ಕಾಮಗಾರಿಗೆ 20 ಕೋಟಿ ರೂ ಹಾಗೂ ಮಂಗಳೂರು ತಾಲೂಕಿನ ಗುರುಪುರ (ಓW-43) ಜಲಮಾರ್ಗದ ಅಭಿವೃದ್ದಿ ಕಾಮಗಾರಿಗೆ 29.62 ಕೋಟಿ ರೂ ಆರ್ಥಿಕ ಸಹಾಯ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸರಕು ಮತ್ತು ಪ್ರಯಾಣಿಕರ ಸಾಗಣೆಗೆ ಕಾರ್ಯಸಾಧ್ಯ 26 ರಾಷ್ಟ್ರೀಯ ಜಲಮಾರ್ಗಗಳ ಪೈಕಿ 13 ರಲ್ಲಿ ಅಭಿವೃದ್ದಿ ಕಾರ್ಯಗಳು ಪ್ರಾರಂಭವಾಗಿವೆ. ದೇಶದಲ್ಲಿ ಜಲಸಾರಿಗೆಯನ್ನು ಉತ್ತೇಜಿಸಲು 111 ಒಳನಾಡಿನ ಜಲಮಾರ್ಗಗಳನ್ನು ರಾಷ್ಟ್ರೀಯ ಜಲಮಾರ್ಗಗಳ ಕಾಯಿದೆ 2016 ಅಡಿಯಲ್ಲಿ ರಾಷ್ಟ್ರೀಯ ಜಲಮಾರ್ಗಗಳು ಎಂದು ಘೋಷಿಸಲಾಗಿದೆ. ಒಳನಾಡಿನ ಜಲ ಸಾರಿಗೆಯ ಮೂಲಕ 108.79 ಮಿಲಿಯನ್ ಮೆಟ್ರಿಕ್ ಟನ್ ಸರಕು ಸಾಗಣೆಯನ್ನು 2021-22 ರ ಅವಧಿಯಲ್ಲಿ ದಾಖಲಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದರು ಮಾಹಿತಿ ಹಂಚಿಕೊಂಡರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ